ಬೆಂಗಳೂರು: ವಿಶ್ವನಾಥ್ ಬಗ್ಗೆ ನಾನೇನು ಮಾತನಾಡುವುದಿಲ್ಲ. ಹೈಕಮಾಂಡ್ಗೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವನಾಥ್ ವಿರುದ್ಧವಾಗಿ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ
Advertisement
ವಿಶ್ವನಾಥ್ ರಿಂದ ವಿಜಯೇಂದ್ರ ಹಸ್ತಕ್ಷೇಪ ಆರೋಪ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಆಧಾರ ರಹಿತವಾಗಿರುವ ಆರೋಪವಾಗಿದೆ. ಅನಾವಶ್ಯಕವಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ಅಂತಹ ಯಾವುದೇ ಹಸ್ತಕ್ಷೇಪ ಆಗಿಲ್ಲ. ನೀರಾವರಿ ಕಿಕ್ ಬ್ಯಾಕ್ ಆರೋಪ ಅದಕ್ಕೆ ನೀರಾವರಿ ಎಂಡಿ ಪ್ರತಿಕ್ರಿಯೆ ಕೊಡ್ತಾರೆ. ಶಿಸ್ತು ಕ್ರಮದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸಂಜೆ ಕೋರ್ ಕಮಿಟಿ ಇದೆ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡೋಕೆ ಅಜೆಂಡಾ ಫಿಕ್ಸ್ ಆಗಿಲ್ಲ. ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡ್ತೀವಿ. ಪ್ರವಾಹ, ರಾಜಕೀಯ ವಿಚಾರಗಳು ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ಬಗ್ಗೆ ಮಾತನಾಡಿದ್ರೆ ನನ್ನ ಬಾಯಿ ಹೊಲಸಾಗುತ್ತೆ: ರೇಣುಕಾಚಾರ್ಯ
Advertisement
Advertisement
ವಿಶ್ವನಾಥ್ ಆರೋಪ ಏನು?
ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಎಲ್ಲಾ ಸಚಿವರು ಮಾತನಾಡುತ್ತಿದ್ದಾರೆ. ಯಾವ ಸಚಿವರು ಸಮಾಧಾನದಿಂದ ಇದ್ದಾರೆ ಹೇಳಿ? ಯಡಿಯೂರಪ್ಪ ಮಕ್ಕಳಿಂದ ಮೊದಲು ಜೈಲಿಗೆ ಹೋಗಿದ್ದರು. ಎರಡನೇ ಬಾರಿಗೆ ಹೀಗಾಗಬಾರದು ಅನ್ನೋದು ನಮ್ಮ ಆಶಯ. ಯಡಿಯೂರಪ್ಪನವರದು ಇ.ಡಿಯಲ್ಲಿ ಕೇಸಿಲ್ವಾ ಎಂದು ಪ್ರಶ್ನಿಸಿದ್ದಾರೆ. ರೇಣುಕಾಚಾರ್ಯ ಜಯಲಕ್ಷ್ಮಿ ನರ್ಸ್ ಕಥೆ ಏನಾಯ್ತು? ಊಟಕ್ಕೆ ಕರೆದ ಸ್ನೇಹಿತನ ಹೆಂಡತಿಯನ್ನು ಅತ್ಯಾಚಾರ ಮಾಡಲು ಹೋಗಿ ಹಾಲಪ್ಪ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದಾನೆ ಎಂದು ಎಚ್.ವಿಶ್ವನಾಥ್ ಬಹಿರಂಗವಾಗಿ ಕಿಡಿಕಾರಿದ್ದಾರೆ.
Advertisement
ನಾನು ನಿನ್ನೆ ಅರುಣ್ ಸಿಂಗ್ ಭೇಟಿ ಮಾಡಿ ರಾಜ್ಯದಲ್ಲಿ ಪಕ್ಷದ ರಾಜಕಾರಣ ಹಾಗೂ ಸರ್ಕಾರದ ಆಡಳಿತದ ಬಗ್ಗೆ ಹೇಳಿದ್ದೇನೆ. ಇನ್ನು 22 ತಿಂಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಹೀಗೆ ಹೋದರೆ ಹಿನ್ನಡೆ ಆಗುತ್ತೆ ಅಂತ ಹೇಳಿದ್ದೇನೆ. ಅಲ್ಲದೆ 2024 ರ ಲೋಕಸಭೆ ಚುನಾವಣೆಗೂ ಎಫೆಕ್ಟ್ ಆಗುತ್ತೆ ಅಂತ ಹೇಳಿದ್ದೇನೆ. ಇದಕ್ಕೆಲ್ಲ ನಾಯಕತ್ವವೇ ಕಾರಣ, 75 ವರ್ಷ ಮೀರಿದವರ ಬಗ್ಗೆ ನಮ್ಮ ಪಕ್ಷದಲ್ಲೇ ಲಕ್ಣ್ಮಣ ರೇಖೆ ಇದೆ. ಅದು ದಾಟಿದ ಮೇಲೆ ವಯಸ್ಸು ಸಹಕರಿಸಲ್ಲ. ಯಡಿಯೂರಪ್ಪ ನವರಿಗೆ ಮೊದಲು ಶಕ್ತಿ ಇತ್ತು ಈಗ ಇಲ್ಲ. ಶಕ್ತಿ ಪೀಠದ ಪ್ರಭಾವಳಿ ಕಡಿಮೆ ಆಗುತ್ತಿದೆ. ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕ್ರಮದ ವಿರುದ್ದ ಮಾತನಾಡಿಲ್ಲ ಎಂದು ಎಚ್.ವಿಶ್ವನಾಥ್ ಗುಡುಗಿದ್ದಾರೆ.