ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಇಡೀ ಜಿಲ್ಲೆ ಸ್ತಬ್ದವಾಗಿತ್ತು. ವಾಹನ ಸವಾರರು ರೋಡಿಗಿಳಿಯದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ.
Advertisement
ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪೊಲೀಸರು ಚೆಕ್ ಪೋಸ್ಟ್ ಹಾಕಿ ತಪಾಸಣೆ ನಡೆಸುತ್ತಿದ್ದಾರೆ.ವೀಕೆಂಡ್ ಕರ್ಫ್ಯೂ ಹಿನ್ನಲೆಯಲ್ಲಿ ಹಾಲು, ಮೆಡಿಕಲ್, ತುರ್ತು ವೈದ್ಯಕೀಯ ಸೇವೆ, ವ್ಯಾಕ್ಸಿನೇಷನ್ ಹೊರತುಪಡಿಸಿ ಎಲ್ಲವೂ ಬಂದ್ ಆಗಿದೆ. ಅನಗತ್ಯವಾಗಿ ಓಡಾಟ ನಡೆಸಿದ ವಾಹನಗಳನ್ನು ಇಂದು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ನಿನ್ನೆ ಮಂಗಳೂರು ನಗರ ವ್ಯಾಪ್ತಿಯಲ್ಲೇ 66 ವಾಹನಗಳನ್ನು ಸೀಜ್ ಮಾಡಲಾಗಿದೆ.
Advertisement
Advertisement
ಇಂದೂ ಅನಗತ್ಯವಾಗಿ ಸಂಚರಿಸಿದ ವಾಹನಗಳನ್ನು ಸೀಜ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಿನ್ನಲೆಯಲ್ಲಿ ಇಡೀ ಜಿಲ್ಲೆ ಸ್ತಬ್ದವಾಗಿತ್ತು. ನಾಳೆಯಿಂದ ಸೆಮಿ ಲಾಕ್ಡೌನ್ ಇದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 2 ರವರೆಗೆ ಎಲ್ಲ ಅಂಗಡಿಗಳು ಓಪನ್ ಇರಲಿವೆ. ಎಲ್ಲ ವಾಹನಗಳ ಓಡಾಟಕ್ಕೂ ಅವಕಾಶ ಇದೆ. 2 ಗಂಟೆಯ ಬಳಿಕ ಎಲ್ಲವೂ ಬಂದ್ ಆಗಲಿದೆ.