ಮುಂಬೈ: ರಸ್ತೆ ಬದಿಯಲ್ಲಿ ನಿಂತು ವೇಶ್ಯಾವಾಟಿಕೆ ದಂಧೆಗೆ ಬರುವಂತೆ ಮಹಿಳೆಯರನ್ನು ಒತ್ತಾಯಿಸುತ್ತಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
Advertisement
Advertisement
ಆರೋಪಿಯನ್ನು ಶಿವಕಾಂತ್ ರಮೇಶ್ ಸಿಂಗ್ (36) ಎಂದು ಗುರುತಿಸಲಾಗಿದೆ. ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಈತನನ್ನು ಭಾರತೀಯ ದಂಡ ಸಂಹಿತೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಶಿವಕಾಂತ್ ರಮೇಶ್ ತಲೋಪಾಲಿ ಪ್ರದೇಶದ ರಸ್ತೆಯಲ್ಲಿ ನಿಂತು ಕೊಂಡು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ವೇಶ್ಯಾವಾಟಿಕೆಗೆ ಬರುವಂತೆ ಒತ್ತಾಯ ಮಾಡುತ್ತಿದ್ದನು. ಇದರಿಂದ ಮನನೊಂದ ಮಹಿಳೆಯರು ಬಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಾನವ ಕಳ್ಳಸಾಗಣಿಕೆ ಆರೋಪದಡಿ ಆರೋಪಿ ಶಿವಕಾಂತ್ ರಮೇಶ್ ಸಿಂಗ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.