ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವೀಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ. ಮತ್ತೊಂದೆಡೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು, ಸದಸ್ಯರು ಮತ್ತು ಮುಖ್ಯ ಶಿಕ್ಷಕರು, ಇತರ ನಾಗರಿಕರೊಂದಿಗೆ ಆಚರಣೆಯಲ್ಲಿ ಭಾಗವಹಿಸಬಹುದಾಗಿದೆ.
Advertisement
Advertisement
ಸ್ವಾತಂತ್ರ್ಯ ದಿನದ ನಂತರ, ವಿದ್ಯಾರ್ಥಿಗಳು ದಿನದ ಮಹತ್ವ, ರಸಪ್ರಶ್ನೆ ಮತ್ತು ರಾಷ್ಟ್ರೀಯತೆಯ ಬಗ್ಗೆ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಆನ್ ಲೈನ್ ಚರ್ಚೆಯಲ್ಲಿ ಭಾಗವಹಿಸಬೇಕು, ಸ್ವಾತಂತ್ರ್ಯ ಹೋರಾಟಗಾರರ ಪ್ರಾಮುಖ್ಯತೆ ಮತ್ತು ಸ್ವಾತಂತ್ರ್ಯ ಹೋರಾಟದ ಮಹತ್ವದ ಬಗ್ಗೆ ಅರಿಯಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದೆ.
Advertisement
ದೊಡ್ಡ ದೊಡ್ಡ ಸಭೆ ನಡೆಸುವಂತಿಲ್ಲ, ಸಾರ್ವಜನಿಕರಿಗೆ ಅವಕಾಶವಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ನಿಯಮ ರೂಪಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪಿಎಸ್ಐ ಆಗುವ ಛಲ- 1.36 ನಿಮಿಷದಲ್ಲಿ 400 ಮೀಟರ್ ಓಡಿ ಪಾಸಾದ ಗರ್ಭಿಣಿ!