– ಜ್ವರ, ನೆಗಡಿ, ಕೆಮ್ಮು ಬಂದ್ರೆ ಶಾಲೆಗೆ ಬರಬೇಡಿ
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಬರೋಬ್ಬರಿ 9 ತಿಂಗಳ ಬಳಿಕ ಕೆಲವೊಂದು ಮಾರ್ಗಸೂಚಿಗಳೊಂದಿಗೆ ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಆರಂಭವಾಗಿವೆ. ಶಾಲಾ-ಕಾಲೇಜು ಪ್ರಾರಂಭ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಹೊರವಲಯದ ಆನೇಕಲ್ನ ಹೆಬ್ಬುಗೋಡಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿ ಸಚಿವರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತಾಡಿದ್ದಾರೆ. ಅಲ್ಲದೆ ಮಕ್ಕಳಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಸಚಿವರು ಮಕ್ಕಳಿಗೆ ಮಾರ್ಗಸೂಚಿಗಳ ಬಗ್ಗೆ ಬೋಧನೆ ಮಾಡಿದ್ದಾರೆ.
Advertisement
Advertisement
ಜ್ವರ, ನೆಗಡಿ, ಕೆಮ್ಮು ಬಂದ್ರೆ ಶಾಲೆಗೆ ಬರಬೇಡಿ ಎಂದು ಸಲಹೆ ನೀಡಿದ್ದಾರೆ. ಮಾರ್ಚ್ ನಲ್ಲಿ ಪರೀಕ್ಷೆ ಮಾಡೋಣ ಎಂದಾಗ ವಿದ್ಯಾರ್ಥಿಗಳು ಮಾಡಿ ಸರ್ ಎಂದು ಹೇಳಿದ್ದಾರೆ.
Advertisement
ಧರ್ಮಸ್ಥಳ ವೀರೇಂದ್ರ ಹೆಗ್ಗಡೆ, ಸಿದ್ದಗಂಗಾ ಮಠದ ಶ್ರೀ, ಆದಿಚುಂಚನಗಿರಿ ಶ್ರೀಗಳು, ಸುತ್ತೂರು ಶ್ರೀಗಳು ನಿಮಗೆ ಶುಭಾಶಯ ಹೇಳಿದ್ದಾರೆ ಎಂದು ಹೇಳುವ ಮೂಲಕ ಸಚಿವರು ಮಕ್ಕಳಿಗೆ ಧೈರ್ಯ ತುಂಬಿದ್ದಾರೆ. ನಂತರ ಮಕ್ಕಳಿಂದಲೇ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.