ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ.
Advertisement
ಇಂದು ನಡೆದ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಪರೀಕ್ಷೆ ಆಯೋಜನೆ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರೈಲಿನ ಕೆಳಗೆ ಸಿಲುಕಿದ ವೃದ್ಧ – ಸಾವಿನ ಅಂಚಿನಿಂದ ಪಾರು
Advertisement
Advertisement
ಹುಕ್ಕೇರಿ ತಾಲೂಕಿನ ಎಸ್ ಕೆ ಪ್ರೌಢ ಶಾಲೆ, ಎಲಿಮುನ್ನೋಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ನೀಡಸೋಶಿ ಗ್ರಾಮ ಹಾಗೂ ಸಂಕೇಶ್ವರ ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ಸಚಿವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಸರ್ಕಾರ ಸೂಚಿಸಿರುವ ನಿಯಮಾವಳಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಹುಕ್ಕೇರಿ ತಹಶೀಲ್ದಾರ ಡಿ.ಎಚ್.ಹೂಗಾರ್, ಮೋಹನ ದಂಡಿನ್, ಪಿಎಸ್ಐ ಸಿದ್ದರಾಮಪ್ಪ ಉನ್ನದ, ಪರಗೌಡ ಪಾಟೀಲ್, ಜಯಗೌಡ ಪಾಟೀಲ್, ಪಿಂಟು ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಚಿನ್, ಸೆಹ್ವಾಗ್ ಬಳಿಕ ಆರಂಭಿಕನಾಗಿ ಶಿಖರ್ ಧವನ್ ನೂತನ ಮೈಲಿಗಲ್ಲು
Advertisement