ತುಮಕೂರು: ಶಿರಾದಲ್ಲಿ ಇದೇ ಮೊದಲ ಬಾರಿಗೆ ಜಯಗಳಿಸುವ ಮೂಲಕ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ರಾಜೇಶ್ ಗೌಡ ಅವರು ಕಾಂಗ್ರೆಸ್ನ ಹಿರಿಯ ನಾಯಕ ಟಿಬಿ ಜಯಚಂದ್ರ ಅವರನ್ನು ಸೋಲಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯಗಳಿಸಿದ ನಮ್ಮ ಪಕ್ಷದ ಡಾ. ರಾಜೇಶ್ ಗೌಡ ಅವರಿಗೆ ಅಭಿನಂದನೆಗಳು.#KarnatakaWithBJP pic.twitter.com/py7a3RcwDt
— BJP Karnataka (@BJP4Karnataka) November 10, 2020
Advertisement
ರಾಜೇಶ್ಗೌಡ ಅವರು ಆರಂಭದಿಂದಲೂ ಮುನ್ನಡೆಯಲ್ಲಿದ್ದರು. 13ನೇ ಸುತ್ತಿನಲ್ಲಿ 8,471 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದ ರಾಜೇಶ್ ಗೌಡ ಅವರ ಅಂತರ 15ನೇ ಸುತ್ತಿನ ಮತ ಎಣಿಕೆಯ ವೇಳೆ 1,765 ಅಂತರಕ್ಕೆ ಕುಸಿದಿತ್ತು. ಹೀಗಾಗಿ ಸ್ಪರ್ಧೆ ತೀವ್ರಗೊಂಡಿತ್ತು.
Advertisement
Advertisement
ನಂತರದ ಸುತ್ತಿನಲ್ಲಿ ರಾಜೇಶ್ ಗೌಡ ಅಂತರವನ್ನು ಕಾಯ್ಸುಕೊಂಡ ಪರಿಣಾಮ ಅಂತಿಮವಾಗಿ ಮತಗಳ ಅಂತರದಿಂದ ಜಯಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
Advertisement
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರಿಗೆ ಅಭಿನಂದನೆಗಳು. ಈ ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೂ ಅಭಿನಂದನೆಗಳು. @BJP4Karnataka
— Dr Sudhakar K (@mla_sudhakar) November 10, 2020
2018 ರ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಸತ್ಯನಾರಾಯಣ ಅವರು 74,338 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ 63,973, ಬಿಜೆಪಿ 16,959 ಮತಗಳನ್ನು ಪಡೆದಿತ್ತು.