ಶಿವಮೊಗ್ಗ: ಕೊರೊನಾ ಮಹಾಮಾರಿಗೆ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಮೊದಲ ಘಟನೆಯಾಗಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಮೂಲವ್ಯಾಧಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಕಳೆದ ಮೂರು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ಸ್ವತಃ ಅವರೇ ಆಗಮಿಸಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಆದರೆ ಈ ವೃದ್ಧೆ ಸಾವನ್ನಪ್ಪುವ ಮೊದಲೇ ಇವರಿಗೆ ಕೋವಿಡ್ 19 ತಪಾಸಣೆ ಸಹ ನಡೆಸಲಾಗಿತ್ತು.
Advertisement
Advertisement
ವೃದ್ಧೆ ಮೃತಪಟ್ಟ ನಂತರ ಕೋವಿಡ್-19 ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.