ರಾಯಚೂರು: ಶಾಲಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪೋಷಕರ ಮೇಲೆ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥೆಯ ಪತಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಇಲ್ಲಿನ ಪಿಡಬ್ಲ್ಯೂಡಿ ಕ್ಯಾಂಪ್ನ ಮಾಂಟೆಸ್ಸರಿ ಶಾಲೆಯ 10 ನೇ ತರಗತಿ ವಿದ್ಯಾರ್ಥಿ ಶಾಲಾ ಶುಲ್ಕ ಸಂಪೂರ್ಣವಾಗಿ ಕಟ್ಟದ ಹಿನ್ನೆಲೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಯ ಫೋಷಕರ ಮೇಲೆ ಗೂಂಡಾಗಿರಿ ಮಾಡಿದ್ದಾರೆ.
Advertisement
Advertisement
ವಿದ್ಯಾರ್ಥಿಯ ತಾಯಿ ನಾಗವಿದ್ಯಾ ಮೇಲೆ ಸತೀಶ್ ಕುಮಾರ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ. ಬಾಕಿ 45 ಸಾವಿರ ಶುಲ್ಕ ಕಟ್ಟಲು ಹಿಂದೇಟು ಹಾಕಿದ್ದ ಪೋಷಕರು 20 ಸಾವಿರ ರೂಪಾಯಿ ಕಟ್ಟಲು ಮುಂದಾಗಿದ್ದರು. ಆದರೆ ಶಾಲಾ ಆಡಳಿತ ಮಂಡಳಿ ಎಂಟು ಹಾಗೂ ಒಂಭತ್ತನೆ ತರಗತಿಯ ಶುಲ್ಕ ಬಾಕಿ ಉಳಿಸಿಕೊಂಡಿದ್ದೀರಾ 10ನೇ ತರಗತಿಗೆ ಪ್ರವೇಶ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಬಾಕಿ 45 ಸಾವಿರ ರೂ. ಹಾಗೂ ಹತ್ತನೆ ತರಗತಿಯ 55 ಸಾವಿರ ರೂ. ಹಣ ಕಟ್ಟಲು ಆಗದೇ ಪೋಷಕರು ಶುಲ್ಕ ಕಡಿಮೆ ಮಾಡುವಂತೆ ಕೇಳಿಕೊಂಡಿದ್ದರು.
Advertisement
Advertisement
ಇದಕ್ಕೆ ಒಪ್ಪದೆ ಇರುವ ಪೋಷಕರು ಶುಲ್ಕ ಕಟ್ಟದೆ ಕಿರಿಕಿರಿ ಮಾಡುತ್ತಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿಯವರೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದರೆ ಪೊಲೀಸ್ ಠಾಣೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಿದ್ಯಾರ್ಥಿ ತಾಯಿಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿರುವುದಲ್ಲದೆ ಜೀವಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ. ಶಾಲಾ ಮುಖ್ಯಸ್ಥೆ ಜ್ಯೋತಿ ಹಾಗೂ ಅವರ ಪತಿ ಸತೀಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ತಾಯಿ ಮೇಲೆ ಹಲ್ಲೆ ಮಾಡಿದ ಸತೀಶ್ ಕುಮಾರ್ನನ್ನ ಪೊಲೀಸರು ಬಂಧಿಸಿದ್ದಾರೆ. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.