ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ.
Advertisement
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Advertisement
Advertisement
ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿರುವ ಹಿನ್ನೆಲೆಯಲ್ಲಿ ಕೂಡಲೇ ವಿದ್ಯುತ್ ಕಟ್ ಮಾಡಲಾಗಿದೆ. 200 ಮೀಟರ್ ಅಂತರದಲ್ಲಿ ಪಟಾಕಿ ಮಳಿಗೆಗಳು ಕೂಡ ಇದ್ದವು. ಈ ಘಟನೆ ಹೊಸ ಬಡವಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.