ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಜಾಗೊಂಡಿದೆ.
Advertisement
ಸಿಟಿ ಸಿವಿಲ್ ಕೋರ್ಟ್ ಗೆ ಜಾಮೀನು ನೀಡುವಂತೆ ಸಂಪತ್ ರಾಜ್ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಆದೇಶಿಸಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಸಂಪತ್ ರಾಜ್ಗೆ ಪರಪ್ಪನ ಅಗ್ರಹಾರದ ಬಾಗಿಲುಗಳು ತೆರೆದಿಲ್ಲ. ಜಾಮೀನಿಗಾಗಿ ಸಂಪತ್ ರಾಜ್ ಸುಪ್ರೀಂಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ.
Advertisement
Advertisement
ಕೊರೊನಾ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಂಪತ್ ರಾಜ್ ಎಸ್ಕೇಪ್ ಆಗಿದ್ದರು. ತದನಂತರ ನವೆಂಬರ್ 16ರಂದು ಸಿಸಿಬಿ ಪೊಲೀಸರು ಸಂಪತ್ ರಾಜ್ ಅವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದ ನ್ಯಾಯಾಲಯ ನಂತರ ನ್ಯಾಯಂಗ ಬಂಧನಕ್ಕೆ ನೀಡಿತ್ತು.
Advertisement