ಬೆಂಗಳೂರು: ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ಶಿಕ್ಷಣ ಸಚಿವ ಸುಧಾಕರ್ ಪ್ರಶ್ನಿಸಿದರು.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ಗಳ ವಿಚಾರಣೆ ವಿಚಾರವಾಗಿ ಸಚಿವ ಸುಧಾಕರ್ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ. ಮೊದಲಿಗೆ “ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನದ ಕೋಪ ತನ್ನ ಅರಿವಿನ ಕೇಡು, ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವಾ?” ಎಂಬ ಗಾದೆಯ ಮಾತನ್ನು ಹೇಳಿದ್ದಾರೆ.
Advertisement
Advertisement
ಬೆಂಗಳೂರು ಗಲಭೆ ಕಾರಣ ಯಾರು? ಎಂಬ ಸತ್ಯ ಹೊರ ಬರುತ್ತಿದೆ. ಕಾಂಗ್ರೆಸ್ ಕಾರ್ಪೊರೇಟರ್ಗಳ ಸಂಪತ್ರಾಜ್, ಜಾಕೀರ್ ಅವರು ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Advertisement
ಮತ್ತೊಂದು ಟ್ವೀಟ್ ಮಾಡಿದ್ದು, “ಕನಿಷ್ಠಪಕ್ಷ ಸತ್ಯಗಳನ್ನು ಗಟ್ಟಿಯಾಗಿ ಹೇಳುವ ಧೈರ್ಯ ಇಲ್ಲದ ಕಾಂಗ್ರೆಸ್ ನಾಯಕರಿಗೆ ಅದೇ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಗೆ ಕಾಂಗ್ರೆಸ್ ನಾಯಕರಿಂದ ನ್ಯಾಯ ಸಿಗಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಈ ಜಗತ್ತಿನಲ್ಲಿ ಚಿರಕಾಲ ಉಳಿಯುವಂಥದ್ದು ನಯ-ವಿನಯವೇ ಹೊರತು ಮೃಗೀಯತೆಯೂ ಅಲ್ಲ, ದೇಹಬಲವೂ ಅಲ್ಲ. ಸತ್ಯಕ್ಕೆ ಸಾವಿಲ್ಲ” ಎಂದು ಕಾರ್ಪೊರೇಟರ್ಗಳ ವಿಚಾರಣೆ ವಿಚಾರವಾಗಿ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.