– ತನ್ನನ್ನು ತಾನು ಸಮರ್ಥಿಸಿಕೊಂಡ ಎಂಎಲ್ಎ
ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರು ಶರ್ಟ್ ಬಿಚ್ಚಿ ತಮ್ಮ ಆಕ್ರೋಶ ಹೊರಹಾಕಿರುವ ಪ್ರಸಂಗ ನಡೆದಿದೆ.
Advertisement
ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ಬೇಕು ಅಂತಾನೇ ಶರ್ಟ್ ಬಿಚ್ಚಿದ್ದು, ನನಗೆ ವಿಷಾದ ಇಲ್ಲ. ನ್ಯಾಯ ಸಿಗಬೇಕು ಎಂದೇ ಶರ್ಟ್ ಬಿಚ್ಚಿದ್ದು. ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ. ಸ್ಪೀಕರ್ ಬಿಜೆಪಿ ಪರ, ನಾನು ಧರಣಿ ಮುಂದುವರಿಸುತ್ತೇನೆ. ಅಪ್ಪ ಮಕ್ಕಳು, ಈಶ್ವರಪ್ಪ ಭದ್ರಾವತಿಯನ್ನ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ನಿಂತಿದ್ದಾರೆ ಎಂದರು.
Advertisement
Advertisement
ವಿಧಾನಸಭಾ ಕಲಾಪದಲ್ಲಿ ಒಂದು ದೇಶ ಒಂದು ಚುನಾವಣೆ ಕುರಿತು ವಿಶೇಷ ಚರ್ಚೆ ಬಗ್ಗೆ ಸ್ಪೀಕರ್ ಕಾಗೇರಿ ಪ್ರಸ್ತಾಪಿಸಿದರು. ಈ ವೇಳೆ ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ನಿಯಮಾವಳಿಗಳಲ್ಲಿ ಈ ಚರ್ಚೆ ಮಾಡುತ್ತೀದ್ದೀರಿ ಎಂದು ಪ್ರಶ್ನಿಸಿದರು.
Advertisement
ವಿಧಾನಸಭೆ ಕಲಾಪಕ್ಕೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಅಖಂಡ ಶ್ರೀನಿವಾಸ್, ಕಲಾಪಕ್ಕೆ ಜೆಡಿಎಸ್ ನಾಯಕ ಹೆಚ್ಡಿಕೆ ಗೈರಾಗಿದ್ದಾರೆ ಎಂದರು. ಈ ವೇಳೆ ಸಿದ್ದರಾಮಯ್ಯರವರಿಗೆ ಸಾಥ್ ನೀಡಿದ ರಮೇಶ್ ಕುಮಾರ್ ಮತ್ತು ಹೆಚ್.ಕೆಪಾಟೀಲ್ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆಗೆ ಅವಕಾಶ ಕೊಟ್ಟರೆ ಕ್ರಿಯಾಲೋಪ ಆಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಮಧ್ಯೆ ಎದ್ದು ನಿಂತು ಸಿಎಂ ಬಿಎಸ್ ಯಡಿಯೂರಪ್ಪ ಸ್ಪೀಕರ್ ಅವರು ಸಂವಿಧಾನದ ಚೌಕಟ್ಟಿನಲ್ಲೇ ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ ಸಹಕರಿ ಎಂದು ಮನವಿ ಮಾಡಿದರು.
ಈ ಎಲ್ಲಾ ಗೊಂದಲಗಳ ನಡುವೆ ಸ್ಪೀಕರ್ ಒಂದು ದೇಶ ಒಂದು ಚುನಾವಣೆ ಚರ್ಚೆಯ ಪ್ರಸ್ತಾವನೆ ಓದಲು ಮುಂದುವರಿಸಿದರು. ಈ ವೇಳೆ ಇದು ಆರ್ಎಸ್ಎಸ್ ಅಜೆಂಡಾ, ಪ್ರಧಾನಿ ಡಿಕ್ಟೇಟರ್ ಎಂದು ಸಿದ್ದರಾಮಯ್ಯ ಜರಿದರು. ಅಲ್ಲದೆ ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಇದರಿಂದ ಕೋಪಗೊಂಡ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ 19 ಜನ ಮಾತನಾಡುವವರ ಪಟ್ಟಿಯನ್ನು ಕೊಟ್ಟಿದ್ದೀರಿ. ಮೊದಲಿನಿಂದಲೂ ಇದನ್ನು ಒಪ್ಪಿಕೊಂಡು ಈಗ ಬೆಳಗ್ಗೆ ಏಕಾಏಕಿ ಬೇಡ ಅಂದರೆ ಏನು ಅರ್ಥ. ಇದು ಯಾರಿಗೂ ಕ್ಷೋಭೆ ತರುವುದಿಲ್ಲ ಎಂದು ಕಿಡಿಕಾರಿದರು.