ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಕೋವಿಡ್-19 ಸೋಂಕು ತಗುಲಿದೆ. ಸದಾನಂದ ಗೌಡರು ಟ್ವಿಟ್ಟರ್ ಮೂಲಕ ಸೋಂಕು ತಗುಲಿರುವ ಮಾಹಿತಿಯನ್ನ ಬಹಿರಂಗಪಡಿಸಿದ್ದಾರೆ.
Advertisement
ಸೋಂಕಿನ ಕೆಲ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ತಗಲಿರೋದು ಖಚಿತವಾಗಿದ್ದು, ಐಸೋಲೇಷನ್ ನಲ್ಲಿದ್ದೇನೆ. ನನ್ನ ಸಂಪರ್ಕದಲ್ಲಿ ಬಂದವರು ತಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಿ ಮತ್ತು ಕೊರೊನಾ ನಿಯಮಗಳನ್ನ ಪಾಲಿಸಿ ಎಂದು ಸದಾನಂದ ಗೌಡರು ತಿಳಿಸಿದ್ದಾರೆ.
Advertisement
Advertisement
3-4 ತಿಂಗಳಿನಲ್ಲಿ ಕೊರೊನಾಗೆ ಭಾರತ ಲಸಿಕೆ ಸಿಗಲಿದೆ. ಲಸಿಕೆ ಲಭ್ಯವಾಗುವ ವಿಚಾರದಲ್ಲಿ ನನಗೆ ಬಹಳ ವಿಶ್ವಾಸವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಾರ್ಯಕ್ರಮದ ಒಂದರಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಮಾನದಂಡಗಳ ಅಡಿಯಲ್ಲಿ ಲಸಿಕೆ ವಿತರಣೆ ಮಾಡಲಾಗುವುದು. ಆರೋಗ್ಯ ಕಾರ್ಯಕರ್ತರಿಗೆ ಮತ್ತು ಕೊರೊನಾ ವಾರಿಯರ್ಸ್ಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಬಳಿಕ ಹಿರಿಯ ನಾಗರಿಕರಿಗೆ ಲಸಿಕೆಯನ್ನು ಹಾಕಲಾಗುವುದು ಎಂದು ಹೇಳಿದ್ದಾರೆ.
Advertisement
After initial symptoms of COVID19, I got myself tested and the report came positive. I have isolated myself. I request everyone who has come in my contact to be careful and follow the protocol. Stay safe.
— Sadananda Gowda (@DVSadanandGowda) November 19, 2020