ಮಡಿಕೇರಿ: ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಹೆಚ್. ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ ಸ್ಥಾನ ಕೊಡುವಂತಹ ಸಾಧ್ಯತೆಗಳು ಕಡಿಮೆ ಇದ್ದು ವರಿಷ್ಠರು ಕೊಟ್ಟ ಮಾತಿನಂತೆ ನಡೆದುಕೊಳ್ಳುವರು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
Advertisement
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಸಮ್ಮಿಶ್ರ ಸರ್ಕಾರದ ಪತನದ ಬಳಿಕ ನಡೆದ ಮಧ್ಯಂತರ ಚುನಾವಣೆಯಲ್ಲಿ ಹೆಚ್.ವಿಶ್ವನಾಥ್ ಅವರು ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಪ್ರಸ್ತುತ ಪಕ್ಷದಿಂದ 4 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಇನ್ನುಳಿದ ರಾಜಕೀಯ, ಶಿಕ್ಷಣ, ಕಲೆ ಹಾಗೂ ಕ್ರೀಡಾ ಕ್ಷೇತ್ರಗಳಿಂದ ಪರಿಷತ್ಗೆ ನಾಮ ನಿರ್ದೇಶನ ಮಾಡಬೇಕಾಗಿರುವುದರಿಂದ ಅಲ್ಲಿ ಅವರಿಗೆ ಸ್ಥಾನ ಸಿಗುವ ನಿರೀಕ್ಷೆಗಳಿವೆ. ಇದನ್ನೂ ಓದಿ: ಎಲ್ಲರೂ ಈಜಿ ದಡ ಸೇರಿದರು, ನಾನು ಸೇರಿಲ್ಲ: ಎಚ್.ವಿಶ್ವನಾಥ್
Advertisement
Advertisement
ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಪ್ರಮುಖವಾಗಿ ಹೆಚ್ ವಿಶ್ವನಾಥ್ ಅವರು ಮುಂಚೂಣಿಯಲ್ಲಿ ಇದ್ದರು. ಇವರ ಜೊತೆ ಬಂದವರು ಎಲ್ಲಾ ದಡ ಸೇರಿದ್ರು. ತಮಗೆ ಇನ್ನೂ ದಡ ಸೇರುವುದಕ್ಕೆ ಅಗಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸದ ವಿಶ್ವನಾಥ್ ಅವರಿಗೆ ಶಾಸಕ ಅಪ್ಪಚ್ಚು ರಂಜನ್ ಅವರ ಅದೃಷ್ಟ ಏನೂ ಮಾಡುವುದಕ್ಕೆ ಅಗೋದಿಲ್ಲ ಎಂದರು.