– ವಿಜಯೇಂದ್ರನಿಂದ ಬಿಜೆಪಿಗೆ ಸನ್ ಸ್ಟ್ರೋಕ್
– ಶೀಘ್ರದಲ್ಲಿಯೇ ಸಿಡಿ ಬ್ಲಾಸ್ಟ್ ಆಗುತ್ತೆ
ರಾಯಚೂರು: ಈ ಹಿಂದೆ ಕಾಂಗ್ರೆಸ್, ಜನತಾದಳದ ರೀತಿಯಲ್ಲಿಯೇ ಬಿಜೆಪಿ ಸಹ ಸನ್ ಸ್ಟ್ರೋಕ್ ಮತ್ತು ಫ್ಯಾಮಿಲಿ ಸ್ಟ್ರೋಕ್ ನಲ್ಲಿ ಹಾಳಾಗುತ್ತಿದೆ ಎಂದು ಎಂಎಲ್ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಇಂದು ರಾಯಚೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಈಗ ನಡೆಯುತ್ತಿರುವುದು ಸನ್ ಸ್ಟ್ರೋಕ್, ಈ ಸನ್ ಸ್ಟ್ರೋಕ್ಗೆ ಹಿಂದೆ ಜನತಾ ಪರಿವಾರ ಮುಳುಗಿತು. ಕಾಂಗ್ರೆಸ್ ಸಹ ಸನ್ ಸ್ಟ್ರೋಕ್ ನಲ್ಲಿ ಹಾಳಾಗಿ ಹೋಗಿದೆ. ಇದೀಗ ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್ ನಲ್ಲಿ ಬಿಜೆಪಿ ಹಾಳಾಗುತ್ತಿದೆ. ಸಿಎಂ ಪುತ್ರ ವಿಜಯೆಂದ್ರನಿಂದ ಈಗ ಬಿಜೆಪಿಗೆ ಸನ್ ಸ್ಟ್ರೋಕ್ ಆವರಿಸಿದೆ. ಯಾರ ಮುಲಾಜು, ಯಾರ ಭಿಕ್ಷೆಯಿಂದ ಸಿಎಂ ಸ್ಥಾನದಲ್ಲಿ ಕುಳಿತಿದ್ದಿರಾ ಯೋಚಿಸಿ ಎಂದು ಪ್ರಶ್ನಿಸಿದರು.
Advertisement
Advertisement
ಭಷ್ಟನಿಗೆ ಮಂತ್ರಿ ಸ್ಥಾನ: ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ ಪರಮಾಧಿಕಾರ. ಹಲವು ಒತ್ತಾಯಗಳು ಬರುವುದು ಸಹಜ. ಆದರೆ ಆದ್ರೆ ಭ್ರಷ್ಟರನ್ನು ಮಂತ್ರಿ ಮಾಡುವ ಒತ್ತಾಯ ಸಾಮಾನ್ಯವಾಗಿ ಬರುವುದಿಲ್ಲ. ಭ್ರಷ್ಟನನ್ನು, ದಲ್ಲಾಳಿಯನ್ನು ಮಂತ್ರಿ ಮಾಡಿರುವುದು ಹುಬ್ಬೇರಿಸುವಂತೆ ಮಾಡಿದೆ. ಯೋಗೇಶ್ವರ್ ಭ್ರಷ್ಟಾಚಾರವನ್ನು ಹೊತ್ತು ಮಲಗಿದ್ದಾನೆ. 9,731 ಜನರ ಬಳಿ ಮೆಗಾ ಸಿಟಿಗೆ ನೂರಾರು ಕೋಟಿ ದುಡ್ಡು ತೆಗೆದುಕೊಂಡಿದ್ದಾನೆ. ಭ್ರಷ್ಟನ ವಿರುದ್ಧ ಮೋಸ ಹೋದವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ನ್ಯಾಯಾಲಯ ಸಿರಿಯಸ್ ಫ್ರಾಡ್ ಇನ್ವೆಸ್ಟಿಗೇಷನ್ ಗೆ ರೆಫರ್ ಮಾಡಿದೆ. ಸಾವಿರಾರು ಜನರಿಗೆ ಟೋಪಿ ಹಾಕಿದವನಿಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇಷ್ಟೆಲ್ಲಾ ಮಾಡಿರುವ ಆತನಿಗೆ ನಿನ್ನೆ ಬಾಯಿ ತಪ್ಪಿ ಸೈನಿಕ ಎಂದೆ ಹಾಗೆ ಕರೆದರೆ ಅದು ನಿಜವಾದ ಸೈನಿಕನಿಗೂ ಅವಮಾನ ಎಂದು ಯೋಗೇಶ್ವರ್ ವಿರುದ್ಧ ಗುಡುಗಿದರು.
Advertisement
Advertisement
ಯಡಿಯೂರಪ್ಪನವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದೆವು. ಬಿಎಸ್ವೈರವರಿಗೆ ಒಳ್ಳೆಯದಾಗಲಿ ಎಂದು 17 ಜನ ಕ್ಷಿಪ್ರ ಕ್ರಾಂತಿಗೆ ಬಂದಿದ್ದೇವು. ಆದರೆ ಸಂಪುಟದಿಂದ ದಲಿತ ನಾಗೇಶ್ ರನ್ನು ಕಿತ್ತು ಹಾಕಿದ್ದಿರಾ, ಹಿಂದುಳಿದ ವರ್ಗದ ಮುನಿರತ್ನನಿಗೆ ಅವಕಾಶ ನೀಡಿಲ್ಲ ಎಂದು ಸಿಎಂ ಬಿಎಸ್ ವೈ ವಿರುದ್ಧ ಆಕ್ರೋಶ ಹೊರಹಾಕಿದರು.
ಶೀಘ್ರದಲ್ಲಿಯೇ ಸಿಡಿ ಬ್ಲಾಸ್ಟ್: ಈ ಬಾರಿ ಸಂಕ್ರಮಣಕ್ಕೆ ಹೋರಿ ಹಿಡಿದಾಗೆ ಹಿಡಿಯಲಾಗುತ್ತದೆ. ಸಿಡಿ ಶೀಘ್ರವೇ ಬಿಡುಗಡೆಯಾಗಲಿದೆ. ಅದನ್ನು ಯತ್ನಾಳ್ ಅಥವಾ ಯಾರೋ ಒಬ್ಬರು ಬಿಡುಗಡೆ ಮಾಡುತ್ತಾರೆ. ಈಗಲೂ ಯಡಿಯೂರಪ್ಪರವರ ಬಗ್ಗೆ ಅಭಿಮಾನವಿದೆ. ಆದರೆ ಅವರು ಕುಟುಂಬ ರಾಜಕಾರಣಕ್ಕೆ ಬಲಿಯಾಗುತ್ತಿದ್ದಾರಲ್ಲಾ ಎಂದು ಬೇಸರವಾಗುತ್ತಿದೆ. ಹಾಗಾಗಿ ಇಂದು ನಾಲಿಗೆ ಇಲ್ಲದ ನಾಯಕರೂ ಆಗಿದ್ದಾರೆ. ಅವರು ಕರೆದು ಮಾತನಾಡಿದರೆ ಮಾತನಾಡುತ್ತೇವೆ, ನಾವು ಸದ್ಯ ಪರಿಸ್ಥಿತಿಯಲ್ಲಿ ಶಿಶುಗಳಂತಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾರಾ ಮಹೇಶ್ ಕೊಚ್ಚೆಗುಂಡಿ: ಅಂದು ಕುಮಾರಸ್ವಾಮಿ, ಸಿದ್ದರಾಮಯ್ಯ ಸರಿಯಾಗಿದ್ದರೆ ಇಂದು ಇದೆಲ್ಲಾ ಆಗುತ್ತಿರಲಿಲ್ಲ ಎಂದರು. ಇನ್ನೂ ಸಾರಾ ಮಹೇಶ್ ಕೊಚ್ಚೆಗುಂಡಿ. ಅವನ ಬಗ್ಗೆ ಯಾವುದೇ ಮಾತನಾಡುವುದಿಲ್ಲ. ನನ್ನನ್ನು ನಮ್ಮವರು ನಡುನೀರಲ್ಲಿ ಬಿಟ್ಟಿಲ್ಲ, ಇಲ್ಲಿ ಯಾವ ನೀರೇ ಇಲ್ಲಾ. ನಾನೇನಾದರೂ ಅಸಂಬದ್ಧವಾಗಿ ಮಾತನಾಡಿದರೆ ನನ್ನ ವಿರುದ್ಧ ಕ್ರಮ ತೆಗೆದುಕೊಳ್ಳಲಿ ಎಂದು ವಾಗ್ದಾಳಿ ತಿಳಿಸಿದರು.