ಕೊಪ್ಪಳ: ಸಮಗ್ರ ಕರ್ನಾಟಕದ ಯೋಗ ಯೋಗ್ಯತೆ ಇದ್ದವರು ಯಾರು ಬೇಕಾದರು ಸಿಎಂ ಆಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ಈ ಮಾತು ಆಡಲು ವಿಶ್ವಾಸ ಬಂದಿದ್ದರೆ ಅದು ಕರ್ನಾಟಕ ಏಕೀಕರಣದಿಂದ ಏಕೀಕರಣ ಆಶಯಕ್ಕೆ ಮಣ್ಣು ಹಾಕುವ ಕೆಲಸ ಮಾಡಬಾರದು. ಯತ್ನಾಳರಷ್ಟು ಬುದ್ಧಿವಂತ ನಾನಲ್ಲ, ನಾನು ಪಕ್ಷದ, ಜನರ ನೆಲೆಯಲ್ಲಿ ಕೆಲಸ ಮಾಡುವವನು. ಸಮಗ್ರ ಕರ್ನಾಟಕಕ್ಕೆ ನಾಯಕತ್ವ ಕೊಡುವ ಸಾಮರ್ಥ್ಯ ಉತ್ತರ ಕರ್ನಾಟಕಕ್ಕೆ ಇದೆ. ಮುಖ್ಯಮಂತ್ರಿಗಳು ಯತ್ನಾಳ್ ಜೊತೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
Advertisement
Advertisement
ಉಪ ಚುನಾವಣೆ ಪ್ರಚಾರದಲ್ಲಿ ಮೀರ್ ಸಾಧಿಕ್ ಪದ ಬಳಕೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಿ.ಟಿ.ರವಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಂದು ಸ್ಥಾನ ಗೆದ್ದಿದೆ. ಒಂದು ಬಂದಿದ್ದಕ್ಕೆ ಸಭೆ ಸೇರಿ ಕಾಂಗ್ರೆಸ್ ಜೊತೆ ಸೇರಿ ಹಾಳಾದ್ವಿ, ಜೆಡಿಎಸ್ ಜೊತೆ ಸೇರಿ ಹಾಳಾದ್ವಿ ಎಂದು ಹೇಳಿದವರು ಯಾರು? ಯಾರು ಮೀರ್ ಸಾಧಿಕ್ ಎನ್ನುವುದು ಅವರಿಗೆ ಬಿಟ್ಟದ್ದು ಎಂದರು.
Advertisement
ಉತ್ತರ ಕರ್ನಾಟಕದಲ್ಲಾದ ಅನೀರಿಕ್ಷಿತ ಪ್ರವಾಹಕ್ಕೆ ಸರ್ಕಾರ ಸ್ಪಂದಿಸುತ್ತಿದೆ. ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ತ್ವರಿತ ಗತಿಯಲ್ಲಿ ಪರಿಹಾರ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಇಂದು ಮುಖ್ಯಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡುತ್ತಿದ್ದಾರೆ. ಕೆಲವು ಸಚಿವರು ಕೊರೊನಾದಿಂದ ಬಳಲುತ್ತಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ಪ್ರವಾಹ ಬಂದಿದೆ ಎಂದರು.
ಕಾಂಗ್ರೆಸ್ ನವರು ನಿರೀಕ್ಷಿತ ಮಟ್ಟದಲ್ಲಿ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ವಿರೋಧಿಸುತ್ತಿದ್ದು, ಕಾಂಗ್ರೆಸ್ ನವರದ್ದು ಗ್ರಾಮೋಫೋನ್ ಕ್ಯಾಸೆಟ್ ಇದ್ದಂಗೆ ಯುಪಿಎ ಕೊಟ್ಟ ಪರಿಹಾರಕ್ಕಿಂದ ನಾಲ್ಕು ಪಟ್ಟು ಹೆಚ್ಚು ಎನ್ಡಿಎ ಸರ್ಕಾರ ನೀಡಿದೆ ಎಂದು ತಿರುಗೇಟು ನೀಡಿದರು.