ಬೆಂಗಳೂರು: ನಮ್ಮ ಮುಂದೆ ಆರ್ಥಿಕ, ಸಾಮಾಜಿಕ ಸವಾಲುಗಳಿದ್ದು, ಆದ್ರೆ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಕೆಲಸ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿ ಮಂತ್ರಿಗಳ ಮೇಲೆ ರಾಜ್ಯದ ಜನತೆ ವಿಶ್ವಾಸವನ್ನು ಇಟ್ಟುಕೊಂಡಿದ್ದು, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಯಡಿಯೂರಪ್ಪನವರ ನೇತೃತ್ವ ಮತ್ತು ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ.
Advertisement
Advertisement
ಕಣ್ಣೀರು ಒರೆಸುವ ಕೆಲಸ:
ರಾಜ್ಯದ ಜನತೆ ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಸಂಕಷ್ಟ ಮತ್ತು ಎರಡು ಬಾರಿ ಪ್ರವಾಹ ಎದುರಿಸಿದ್ದಾರೆ. ಆ ಸಂಕಷ್ಟದಲ್ಲಿರುವ ಜನರ ನೆರವಿಗೆ ನಮ್ಮ ಸರ್ಕಾರ ನಿಲ್ಲಲ್ಲಿದ್ದು, ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತವನ್ನು ಕೊಡುತ್ತೇವೆ. ನಮ್ಮ ಎಲ್ಲ ನಿರ್ಣಯಗಳು ಕಟ್ಟಕಡೆಯ ವ್ಯಕ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತೆಗೆದುಕೊಳ್ಳುತ್ತೇವೆ. ಅವರ ಕಣ್ಣೀರು ಒರೆಸುವಂತಹ ಕೆಲಸವನ್ನು ಮಾಡುತ್ತೇವೆ. ಬಡವರು, ದಲಿತರು, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಹಾಗೂ ಪ್ರಾದೇಶಿಕ ಅಸಮತೋಲನ ಹೊಡೆದೊಡಿಸಲು ಸರ್ಕಾರ ಹೆಚ್ಚಿನ ಪ್ರಾಶಸ್ತ್ಯ ನೀಡಲಿದೆ ಎಂದು ರಾಜ್ಯದ ಜನತೆಗೆ ನೂತನ ಮುಖ್ಯಮಂತ್ರಿಗಳು ಮಾತು ನೀಡಿದರು.
Advertisement
ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ | Basavaraj Bommai Takes Oath As CM#BasavarajBommai #BJP #KarnatakaBJP #KarnatakaPolitics #KannadaNews #BSYediyurappa #KarnatakaNewCM #ಬಸವರಾಜಬೊಮ್ಮಾಯಿ @BSBommai pic.twitter.com/9BD6KbuEgR
— PublicTV (@publictvnews) July 28, 2021
Advertisement
ಆತ್ಮವಿಶ್ವಾಸ ಇದೆ:
ವಿಧಾನಸೌಧಕ್ಕೆ ತೆರಳಿ ಹಲವು ಕಡತಗಳನ್ನು ಮಂಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇವತ್ತಿನ ಎಲ್ಲ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿಸಿ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಿದ್ದೇನೆ. ನಮ್ಮ ಮುಂದೆ ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಈ ಸವಾಲುಗಳನ್ನು ಮೆಟ್ಟಿಲಾಗಿ ಮಾಡಿಕೊಂಡು ಎದುರಿಸಿ ಯಶಸ್ಸು ಕಾಣುತ್ತೇನೆ ಎಂಬ ಆತ್ಮವಿಶ್ವಾಸ ಹೊಂದಿದ್ದೇನೆ.
ನಮ್ಮದು ಟೀಂ ವರ್ಕ್:
ನಮ್ಮ ಎಲ್ಲ ನಾಯಕರು, ಅಧಿಕಾರಿಗಳು ಮತ್ತು ಶಾಸಕರನ್ನು ಒಗ್ಗೂಡಿಸಿಕೊಂಡು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ನಾನು ಮುಖ್ಯಮಂತ್ರಿ ಅನ್ನೋದಕ್ಕಿಂತ ಎಲ್ಲರಲ್ಲಿ ನಾನೂ ಒಬ್ಬನು ಅನ್ನೋ ಭಾವನೆಯಿಂದ ಟೀಂ ವರ್ಕ್ ನಲ್ಲಿ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ವಲಸಿಗರು ನಮ್ಮ ಪಕ್ಷದವರು, ಸಾಮಾಜಿಕ ನ್ಯಾಯ ಪರಿಗಣಿಸಿ ಮಂತ್ರಿ ಸ್ಥಾನ : ಕಟೀಲ್
ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ಯಾರಿಗೆ ಕೊಕ್ ನೀಡ್ತಾರೆ ಗೊತ್ತಿಲ್ಲ, ನಾನ್ ಮಾತ್ರ ಸಂಪುಟದಲ್ಲಿ ಇರ್ತೀನಿ: ಎಂಟಿಬಿ ನಾಗರಾಜ್