ಕೋವಿಡ್-19 ಸಾಂಕ್ರಮಿಕ ರೋಗ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಅಗತ್ಯ. ಆದ್ರೆ ವ್ಯಕ್ತಿಯೋರ್ವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಜುಗಾಡ(ಡಬ್ಬ)ವನ್ನು ಧರಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವೀಡಿಯೋದಲ್ಲಿ ವ್ಯಕ್ತಿಯು ತನ್ನನ್ನು ಸಂಪೂರ್ಣವಾಗಿ ನಾಲ್ಕು ಕಡೆಗಳಿಂದ ಬಾಕ್ಸ್ ಮಾದರಿ ಪ್ಲಾಸ್ಟಿಕ್ ಪರದೆಯಲ್ಲಿ ಕವರ್ ಮಾಡಿಕೊಂಡಿದ್ದಾನೆ. ಅಲ್ಲದೆ ಪ್ಲಾಸ್ಟಿಕ್ ಬಾಕ್ಸ್ ಒಳಗೆ ಆರಾಮವಾಗಿ ಕುಳಿತುಕೊಂಡು ತನ್ನ ಮೊಬೈಲ್ನನ್ನು ಸ್ಕ್ರೋಲ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ.
Advertisement
Social distancing #CoronaInnovation pic.twitter.com/s7NyqHbF8i
— Harsh Goenka (@hvgoenka) May 15, 2021
Advertisement
ಈ ವೀಡಿಯೋವನ್ನು ಉದ್ಯಮಿ ಹರ್ಷ್ ಗೋಯೆಂಕಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಕೊರೊನಾ ಇನೋವೇಶನ್’ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈವರೆಗೂ 19 ಸಾವಿರಕ್ಕೂ ಹೆಚ್ಚು ವ್ಯೂವ್ಸ್ ಬಂದಿದ್ದು, ಅನೇಕ ಮಂದಿ ಕಮೆಂಟ್ ಮಾಡಿದ್ದಾರೆ.