ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುರುವಾರದಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾಣ ಮೂಲಕ ಕುಮಟಾ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದಿತ್ತು.
Advertisement
Advertisement
ಈ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಬರುವ ಅನಿವಾರ್ಯತೆಗೆ ಸಿಲುಕಿದ್ದ ಸಾರಿಗೆ ಸಿಬ್ಬಂದಿ ಸ್ವತಃ ಕಾರ್ಯಾಚರಣೆಗಿಳಿದಿದ್ದರು. ಬೃಹತ್ ಮರವನ್ನು ಪ್ರಯಾಸಪಟ್ಟು ತೆರವು ಮಾಡಿ ಬಳಿಕ ಮಕ್ಕಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿದ್ದಾರೆ.
Advertisement
ಈ ಮೂಲಕ ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಹೀಗಾಗಿ ಕಂಡಕ್ಟರ್ ಹಾಗೂ ಡ್ರೈವರ್ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.