ಟೋಕಿಯೋ: ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ಚೀನಾದ ಬಿಂಗ್ ಜಿಯಾವೋ ವಿರುದ್ಧ 21-13, 21-15 ನೇರ ಸೆಟ್ಗಳಿಂದ ಜಯಗಳಿಸಿ ಕಂಚಿನ ಪದಕ ಗೆದ್ದಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಸಿಂಧು ಫೈನಲ್ ನಲ್ಲಿ ಸೋತು ಬೆಳ್ಳಿ ಪದಕವನ್ನು ಗೆದ್ದಿದ್ದರು.
Advertisement
2nd Medal for #IndiaAtTokyo2020 @Pvsindhu1 clinches #Bronze defeating He Bing Jiao of China.
Many congratulations to you champion ! ???????? #TeamIndia pic.twitter.com/TbeIRnMTLV
— Dept of Sports MYAS (@IndiaSports) August 1, 2021
Advertisement
ನಿನ್ನೆ ನಡೆದ ಪಂದ್ಯದಲ್ಲಿ ವಿಶ್ವದ ನಂಬರ್ 1 ಬ್ಯಾಡ್ಮಿಂಟನ್ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧ ಸಿಂಧು ಸೋಲನ್ನು ಅನುಭವಿಸಿದ್ದರು. ಇಂದು ಆರಂಭದಿಂದಲೇ ಭರ್ಜರಿ ಆಟ ಪ್ರದರ್ಶಿಸಿ ಎದುರಾಳಿಯನ್ನು ಸೋಲಿಸಿ ಭಾರತಕ್ಕೆ ಎರಡನೇ ಪದಕವನ್ನು ತಂದುಕೊಟ್ಟಿದ್ದಾರೆ. ಇದನ್ನೂ ಓದಿ : ಡಿಸ್ಕಸ್ ಥ್ರೋನಲ್ಲಿ ಕಮಲ್ಪ್ರೀತ್ ಅಚ್ಚರಿ- ಫೈನಲ್ಗೆ ಲಗ್ಗೆ
Advertisement
Advertisement
ಪುರುಷರ 66 ಕೆಜಿ ಕುಸ್ತಿ ವಿಭಾಗದಲ್ಲಿ ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು, 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.