ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಯಾದ ರೋಹಿಣಿ ಸಿಂಧೂರಿ ಅವರು ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಲು ಕಾವೇರಿ ನಿವಾಸಕ್ಕೆ ಆಗಮಿಸಿದ್ದರು.
Advertisement
ವರ್ಗಾವಣೆ ಬೆನ್ನಲ್ಲೇ ರೋಹಿಣಿ ಸಿಂಧೂರಿ ವರ್ಗಾವಣೆಗೆ ತಡೆ ಕೋರಲು ಸಿಎಂ ಭೇಟಿಗಾಗಿ ಆಗಮಿಸಿದ್ದರು. ಇಡೀ ಪ್ರಕರಣದಲ್ಲಿ ತನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಮನವರಿಕೆ ಮಾಡಿಕೊಡಲು ಸಿಂಧೂರಿ ಯತ್ನಿಸಿದ್ದಾರೆ. ಇದನ್ನೂ ಓದಿ: ಎಲ್ಲಿಯವರೆಗೆ ಹೈಕಮಾಂಡ್ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ – ಬಿಎಸ್ವೈ
Advertisement
Advertisement
ವರ್ಗಾವಣೆ ತಡೆಹಿಡಿಯುವಂತೆ ಸಿಎಂಗೆ ಮನವಿ ಮಾಡಲು ಬಂದಿದ್ದ ಸಿಂಧೂರಿ ಅವರಿಗೆ ಯಾವುದೇ ಕಾರಣಕ್ಕೂ ವರ್ಗಾವಣೆ ತಡೆಹಿಡಿಯಲು ಅಸಾಧ್ಯ ಎಂದು ಸಿಎಂ ಹೇಳಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ರೋಹಿಣಿ ಸಿಂಧೂರಿ ನಿರಾಸೆಯಿಂದಲೇ ವಾಪಸ್ಸಾಗಿದ್ದಾರೆ. ಇದನ್ನೂ ಓದಿ: ಜಗಳ ನಡೆಯದೇ ಇರಲು ಅಂದು ಸಿಂಧೂರಿಯನ್ನು ಸಮರ್ಥಿಸಿಕೊಂಡಿದ್ದೆ – ಪ್ರತಾಪ್ ಸಿಂಹ
Advertisement
ಮಾಜಿ ಸಿಎಂ ಡಿ.ದೇವರಾಜು ಅರಸು ಅವರ 39 ನೇ ಪುಣ್ಯತಿಥಿ ವಿಧಾನಸೌಧದಲ್ಲಿ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ವರ್ಗಾವಣೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಸಿಎಂ, ವರ್ಗಾವಣೆ ಆಗಿತ್ತಲ್ಲ ಅದಕ್ಕೆ ರೋಹಿಣಿ ಸಿಂಧೂರಿ ಬಂದಿದ್ದರು. ಒಮ್ಮೆ ವರ್ಗಾವಣೆ ಮಾಡಿದ್ಮೇಲೆ ಮತ್ತೆ ವಾಪಸ್ ಪಡೆಯೋಕ್ಕಾಗಲ್ಲ. ಬಂದು ರಿಪೋರ್ಟ್ ಮಾಡಿಕೊಳ್ಳಲು ತಿಳಿಸಿದ್ದೇನೆ ಎಂದು ಹೇಳಿದರು.