ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಅಧ್ಯಕ್ಷರಾದ ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಆತಂಕ ಬೇಡ, ಆರೋಗ್ಯವಾಗಿದ್ದೇನೆ- ಆಸ್ಪತ್ರೆಯಿಂದ ಸಿಎಂ ವಿಡಿಯೋ ಸಂದೇಶ
ಸಿಎಂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಆಗಸ್ಟ್ 2 ರಂದು ರಾತ್ರಿ 11 ಗಂಟೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ದಾಖಲಿಸಿಕೊಳ್ಳಲಾಗಿದೆ. ಅವರಿಗೆ ಕೊರೊನಾ ರೋಗ ಲಕ್ಷಣದ ತೀವ್ರತೆ ಕಡಿಮೆ ಇದೆ. ಸದ್ಯಕ್ಕೆ ಸಿಎಂ ಅವರ ಆರೋಗ್ಯ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಪ್ರೋಟೋಕಾಲ್ಗಳ ಪ್ರಕಾರ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ನುರಿತ ವೈದ್ಯರ ತಂಡದಿಂದ ಸಿಎಂಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ತಂಡವು ಸಿಎಂ ಯಡಿಯೂರಪ್ಪ ಅವರ ಆರೋಗ್ಯದ ನಿಗಾ ವಹಿಸಲಾಗುತ್ತಿದೆ ಎಂದು ಡಾ.ಸುದರ್ಶನ್ ಬಲ್ಲಾಳ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಸಿಎಂ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾದ ಬಳಿಕ ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದು, ಯಾರಿಗೂ ಆತಂಕ ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿರುವುದಾಗಿ ತಿಳಿಸಿದ್ದರು.
Advertisement
ಸಿಎಂ ಯಡಿಯೂಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಕುರಿತು ಭಾನುವಾರ ರಾತ್ರಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. “ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ” ಎಂದು ಸಿಎಂ ಟ್ವೀಟ್ ಮಾಡಿದ್ದರು.