ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ರಮೇಶ್ ಜಾರಕಿಹೊಳಿಗೆ ಅಧಿಕಾರಿಗಳು ಸುಮಾರು 4 ಗಂಟೆಗಳ ಕಾಲ ವಿಚಾರಣೆ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ಎಸ್ಐಟಿ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ಹೇಳಿದ್ದೇನು..?
ಎಸ್ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಜಾರಕಿಹೊಳಿ ಹಾರಿಕೆಯ ಉತ್ತರ ನೀಡಿದ್ದಾರೆ. ಆಡಿಯೋ, ವೀಡಿಯೋ ಇಟ್ಟುಕೊಂಡು ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
Advertisement
Advertisement
ಜಾರಕಿಹೊಳಿಗೆ 15 ಆಡಿಯೋ ತುಣುಕುಗಳ ಬಗ್ಗೆ ಎಸ್ಐಟಿ ಅಧಿಕಾರಿಗಳು ಕೇಳಿದ್ದಾರೆ. ಸಿಸಿಟಿವಿ ನರೇಶ್, ಶ್ರವಣ್, ಆಕಾಶ್ ತಲವಾಡೆ, ಅಭಿಷೇಕ್ ಹಾಗೂ ಉದ್ಯಮಿಗಳಿಬ್ಬರ ಫೋಟೋ, ವೀಡಿಯೋ ತೋರಿಸಿ ವಿಚಾರಣೆ ನಡೆಸಿದ್ದಾರೆ. ಈ ಪ್ರಶ್ನೆಗಳಿಗೆ ಜಾರಕಿಹೊಳಿ ಅವರು, ಇವರ್ಯಾರು ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
Advertisement
Advertisement
ಸದಾಶಿವನಗರದಲ್ಲೇ ಹುನ್ನಾರ ನಡೆದಿದೆ ಅನ್ನೋ ಆರೋಪದ ಬಗ್ಗೆ ಹಾಗೂ ಸಿಡಿಕೋರರಿಗೆ ಹಣ ಕೊಟ್ಟಿದ್ದಾರೆ ಅನ್ನೋ ಆರೋಪಗಳ ಮೇಲೂ ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ ಎಸ್ಐಟಿ ಅಧಿಕಾರಿಗಳ ಪ್ರಶ್ನೆಗೆ ಜಾರಕಿಹೊಳಿ ಸ್ಪಷ್ಟ ಉತ್ತರ ನೀಡಿಲ್ಲ ಎಂಬುದಾಗಿ ತಿಳಿದುಬಂದಿದೆ.