ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ.
ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಆರೋಗ್ಯದ ಸ್ಥಿತಿ ಕುರಿತು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಸಿದ್ದರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ. ಜ್ವರ ಇದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ರ್ಯಾಪಿಡ್ ಆಂಟಿಜೆನ್ ಟೆಸ್ಟ್ ವೇಳೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ತಂಡ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.
Advertisement
Advertisement
ಪ್ರಸ್ತುತ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಪ್ರೋಟೋಕಾಲ್ ಪ್ರಕಾರ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ನುರಿತ ವೈದ್ಯರ ತಂಡದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಿಗಾ ವಹಿಸಲಾಗಿದೆ ಎಂದು ತಿಳಿಸಿದೆ.
Advertisement
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು, ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
Advertisement
ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.
— Dr Yathindra Siddaramaiah (@Dr_Yathindra_S) August 4, 2020
ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ನೋಡಿಕೊಳ್ಳುತ್ತಿದ್ದಾರೆ. ಕೊರೊನಾ ಬಂದಿರುವ ಬಗ್ಗೆ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
ಸಿಎಂ ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ. ಆಸ್ಪತ್ರೆಗೆ ದಾಖಲಾಗುವ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಸದ್ಯ ಹಾಲಿ, ಮಾಜಿ ಸಿಎಂಗಳು ಸ್ಪೆಷಲ್ ವಾರ್ಡ್ನಲ್ಲಿದ್ದು, ಆರೋಗ್ಯವಾಗಿದ್ದಾರೆ.