ಚಿಕ್ಕೋಡಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿಯ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮಾಡುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂಬುವುದು ಸುಳ್ಳು. ರಾಜಕೀಯ ದುರದ್ದೇಶದಿಂದ ದಾಳಿ ಆಗಿದ್ದರೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಏಕೆ ದಾಳಿ ಆಗಿಲ್ಲ ಎಂದು ಮರುಪ್ರಶ್ನಿಸಿದರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಭಯ ಪಡೋ ಅಗತ್ಯವಿಲ್ಲ: ಹೆಚ್ಡಿಕೆ
Advertisement
Advertisement
ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಉಮೇಶ್ ಕತ್ತಿ ಅವರು, ಈಗಾಗಲೇ ನಾನು 13 ವರ್ಷ ಮಂತ್ರಿಯಾಗಿ ಕೆಲಸ ಮಾಡಿದ್ದು, ಯುವಕರಿಗೆ ಹೊಸಬರಿಗೆ ಅವಕಾಶ ನೀಡಿದರೆ ತಪ್ಪಿಲ್ಲ. ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೆ ಬಿಟ್ಟರೆ ತಪ್ಪಲ್ಲ. ನಾನು ಹಿರಿಯ ನಾಯಕನಾಗಿ, ಶಾಸಕ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ರಾಜಕೀಯ ಉದ್ದೇಶಕ್ಕಾಗಿ ಸಿಬಿಐ ಬಳಸಿಕೊಂಡಿದ್ದನ್ನು ಕಾಂಗ್ರೆಸ್ ಒಪ್ಪಿಕೊಂಡಂತಾಗಿದೆ: ನಳಿನ್
Advertisement
ಇಂದು ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ಮಾಡುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇತ್ತ ಡಿಕೆ ಶಿವಕುಮಾರ್ ಮತ್ತು ಅಪ್ತರ ನಿವಾಸದ ಮೇಲೆ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಇತ್ತ ಸಿಬಿಐ ದಾಳಿ ವಿಚಾರದಲ್ಲಿ ಆಡಳಿತರೂಢ ಬಿಜೆಪಿ ಹಾಗೂ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ನಾಯಕರ ನಡುವಿನ ಕೆಸರೆರಚಾಟ ಜೋರಾಗಿದೆ.