ಮಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ದಿನದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ನಟಿ ಕಂ ಆ್ಯಂಕರ್ ಅನುಶ್ರೀ ಅವರನ್ನು ಸಿಸಿಬಿ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ನಿರೂಪಕಿಗೆ ಮತ್ತೊಂದು ಭಯ ಶುರುವಾಗಿದೆ.
Advertisement
ಹೌದು. ಸಿಸಿಬಿ ಬಳಿಕ ಇದೀಗ ಅನುಶ್ರೀಗೆ ಡೋಪಿಂಗ್ ಟೆಸ್ಟ್ ಭಯ ಕಾಡುತ್ತಿದೆ. ಸಿಸಿಬಿ ತನಿಖೆ ಮುಗಿದ ಬಳಿಕ ಅನುಶ್ರೀ ಖುಷಿಯಾಗಿದ್ದರು. ಆದರೆ ಕಮಿಷನರ್ ಹೇಳಿಕೆ ಬಳಿಕ ನಟಿ ಚಿಂತಕ್ರಾಂತರಾಗಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ನಟಿಯರಿಗೆ ಹೇರ್ ಫೋಲಿಕಲ್ ಟೆಸ್ಟ್ – ಏನಿದು ಟೆಸ್ಟ್? ನಿಖರ ಹೇಗೆ?
Advertisement
Advertisement
ಡ್ರಗ್ಸ್ ಟೆಸ್ಟ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ. ಇದರಿಂದಾಗಿ ಅನುಶ್ರೀಗೆ ಚಿಂತೆ ಕಾಡಲು ಆರಂಭವಾಗಿದೆ. ಈ ಮಧ್ಯೆ ಡೋಪಿಂಗ್ ಟೆಸ್ಟ್ ಮಾಡಿಸದಂತೆ ಪ್ರಭಾವಿಯೊಬ್ಬರು ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಇದನ್ನೂ ಓದಿ: ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ: ವಿಚಾರಣೆ ಬಳಿಕ ಅನುಶ್ರೀ ಸ್ಪಷ್ಟನೆ
Advertisement
ಇತ್ತ ಡ್ರಗ್ಸ್ ಪ್ರಕರಣ ಸಂಬಂಧ ಓರ್ವ ಪ್ರಮುಖ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಬಂಧಿಸಿದೆ. ಮಹಮ್ಮದ್ ಶಾಕೀರ್ ಬಂಧಿತ ಆರೋಪಿಯಾಗಿದ್ದು, ಡ್ಯಾನ್ಸರ್ ಕಿಶೋರ್, ಕೋರಿಯೋಗ್ರಫರ್ ತರುಣ್ ರಾಜ್ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿದೆ. ಈ ಎಲ್ಲರಿಗೂ ಶಾಕೀರ್ ಡ್ರಗ್ಸ್ ಲಿಂಕ್ ಕೊಡಿಸಿದ್ದ ಎಂಬ ಮಾಹಿತಿ ದೊರೆತಿದ್ದು, ಶಾಕೀರ್ ವಿಚಾರಣೆ ವೇಳೆ ಹಲವು ಹೆಸರುಗಳ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.