ಮಂಡ್ಯ: ಜೆಡಿಎಸ್ ಕಾರ್ಯಕರ್ತರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಾತಾಡುವ ಸ್ವಾತಂತ್ರ್ಯ ಕೆಲವರಿಗೆ ಮಾತ್ರ ಇದೆಯಾ?: ರಾಕ್ಲೈನ್ ವೆಂಕಟೇಶ್
Advertisement
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಸುಮಲತಾ ಅಂಬರೀಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸುಮಲತಾ ಅವರು ಕೆಆರ್ಎಸ್ ಬಿರುಕು ಬಿಟ್ಟಿದೆ ಎಂದು ಸುಳ್ಳು ಹೇಳಿದ್ದಾರೆ. ಈ ರೀತಿಯ ಸುಳ್ಳು ಹೇಳಿಕೆ ನೀಡುವ ಮೂಲಕ ಜಿಲ್ಲೆಯ ಜನರಿಗೆ ಆತಂಕ ಉಂಟು ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಹಿಯಾದ ಅಂಜೂರ ಹಲ್ವಾ ನೀವು ಮಾಡಿ
Advertisement
Advertisement
ಈ ರೀತಿಯ ಸುಳ್ಳನ್ನು ಅವರು ಪ್ರಚಾರಕ್ಕಾಗಿ ಹೇಳಿದ್ದಾರೆ. ಅಂಬರೀಶ್ ಅಣ್ಣನ ಬಗ್ಗೆ ನಮಗೆಲ್ಲರಿಗೂ ಗೌರವ ಇದೆ. ಅವರ ಹೆಸರಿಟ್ಟುಕೊಂಡು ನೀವು ಗೆದ್ದಿದ್ದೀರಾ, ಅದನ್ನು ಉಳಿಸಿಕೊಳ್ಳಿ. ಕುಮಾರಸ್ವಾಮಿ ವಿರುದ್ಧ ಸುಮ್ಮನೆ ಇಲ್ಲಸಲ್ಲದನ್ನು ಹೇಳಬಾರದು, ಗೌರದಿಂದ ಇರುವುದನ್ನು ಕಲಿಯಬೇಕೆಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement