ಕೋಲ್ಕತ್ತಾ: ಯಾಸ್ ಚಂಡಮಾರುತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಜನರಿಗಾಗಿ ಪುರಸಭೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪರಿಹಾರ ಸಾಮಗ್ರಿಗಳನ್ನು ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಅವರ ಸಹೋದರರ ಸೌಮೇಂದು ಅಧಿಕಾರಿ ವಿರುದ್ಧ ವಿರುದ್ಧ ಎಫ್ಐಆರ್ ದಾಖಲಾಗಿದೆ.
Advertisement
ಪೊಲೀಸರ ಮಾಹಿತಿ ಪ್ರಕಾರ ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನಂತೆ, ಯಾಸ್ ಚಂಡಮಾರುತದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಜನರಿಗೆ ವಿತರಿಸಲೆಂದು ಪಶ್ಚಿಮಬಂಗಾಳದ ಕಾಂತಿ ಪುರಸಭೆ ಕಚೇರಿಯಲ್ಲಿ ಶೇಖರಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಪರಿಹಾರ ಸಾಮಾಗ್ರಿಗಗಳನ್ನು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪದ ಬೆನ್ನಲ್ಲೇ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ನಂದಿ ಗ್ರಾಮದಲ್ಲಿ ಮಮತಾಗೆ ಸೋಲು – ಸುವೇಂದು ಅಧಿಕಾರಿಗೆ ಜಯ
Advertisement
Advertisement
2021 ಮೇ 29ರಂದು ಮಧ್ಯಾಹ್ನ 12.30ಕ್ಕೆ ಸುವೇಂದು ಅಧಿಕಾರಿ ಹಾಗೂ ಸೌಮೇಂದು ಅಧಿಕಾರಿ ಅವರ ಸೂಚನೆಯಂತೆ ಪುರಸಭೆ ಕಚೇರಿ ಗೋಡೌನ್ ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಟ್ರಕ್ ಮೂಲಕ ಕದ್ದೊಯ್ಯಲಾಗಿದೆ. ಈ ಕೃತ್ಯಕ್ಕೆ ಬಿಜೆಪಿ ನಾಯಕರು ಕೇಂದ್ರದ ಸಶಸ್ತ್ರ ಪಡೆಯ ನೆರವನ್ನು ಬಳಕೆ ಮಾಡಿದ್ದಾರೆ ಎಂದು ರತ್ನಾದೀಪ್ ಮನ್ನಾ ಆರೋಪ ಮಾಡಿದ್ದಾರೆ.
Advertisement
ಇತ್ತ ಬಿಜೆಪಿಯ ಕೆಲ ನಾಯಕರು ಕೂಡ ಪರಿಹಾರ ಸಾಮಗ್ರಿಗಳನ್ನು ದುರುಪಯೋಗ ಮಾಡಿದ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಇದರೊಂದಿಗೆ ಸುವೇಂದು ಅಧಿಕಾರಿ ಆಪ್ತ ರಾಖೇಲ್ ಬೆರಾ ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಎರಡು ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆಂದು ದೂರು ಕೇಳಿ ಬಂದ ಹಿನ್ನೆಲೆ ಅವರನ್ನು ವಂಚನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದೀಗ ಕಳ್ಳತನದ ಆರೋಪದಲ್ಲಿ ಸುವೇಂದು ಅಧಿಕಾರಿ ವಿರುದ್ಧವು ಎಫ್ಐಆರ್ ದಾಖಲಾಗಿದೆ.