-51 ದಿನ, 60 ಪಂದ್ಯ ನಡೆಯಲಿದೆ: ಬ್ರಿಜೇಶ್ ಪಟೇಲ್
ನವದೆಹಲಿ: ಬಹು ನಿರೀಕ್ಷಿತ 2020ರ ಐಪಿಎಲ್ ಟೂರ್ನಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ ಎಂದು ಐಪಿಎಲ್ ಆಡಳಿತ ಸಮಿತಿ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಘೋಷಿಸಿದ್ದಾರೆ.
ಟೂರ್ನಿಯ ಕುರಿತ ಅಂತಿಮ ವಿವರಗಳನ್ನು ಹಾಗೂ ವೇಳಾಪಟ್ಟಿಯನ್ನು ಅನುಮೋದಿಸಲು ಮುಂದಿನ ವಾರ ಆಡಳಿತ ಮಂಡಳಿ ಸಭೆ ನಡೆಸಲಾಗುತ್ತದೆ. ಬಿಸಿಸಿಐ ಟೂರ್ನಿ ಯೋಜನೆಯ ಬಗ್ಗೆ ಅನೌಪಚಾರಿಕವಾಗಿ ಈಗಾಗಲೇ ಐಪಿಎಲ್ ಫ್ರಾಂಚೈಸಿಗಳಿಗೆ ತಿಳಿಸಿದೆ ಎಂಬ ಮಾಹಿತಿ ಲಭಿಸಿದೆ.
Advertisement
Advertisement
ಶೀಘ್ರವೇ ಆಡಳಿತ ಸಮಿತಿ ಸಭೆ ಕರೆದು ವೇಳಾಪಟ್ಟಿಯನ್ನು ಫೈನಲ್ ಮಾಡಲಾಗುವುದು. ಟೂರ್ನಿ ಸೆ.19 ರಿಂದ ನ.8ರ ವರೆಗೂ ನಡೆಯಲಿದೆ. ಸರ್ಕಾರ ಅನುಮತಿಯನ್ನು ನಿರೀಕ್ಷೆ ಮಾಡುತ್ತಿದ್ದೇವೆ. 60 ಪಂದ್ಯ, 51 ದಿನ ಯಾವುದೇ ಪಂದ್ಯಗಳ ಖಡಿತವಿಲ್ಲದೇ ಸಂಪೂರ್ಣ ಟೂರ್ನಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸುದ್ದಿ ಸಂಸ್ಛೆ ಪಿಟಿಐ ಮಾಧ್ಯಮಕ್ಕೆ ತಿಳಿಸಿದ್ದಾರೆ.
Advertisement
Indian Premier League (IPL) 2020 to be played from 19th September to 8th November. It will be a full-fledged tournament: Brijesh Patel, IPL Chairman pic.twitter.com/QsULr9EqtZ
— ANI (@ANI) July 24, 2020
Advertisement
ಐಸಿಸಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ಅವಧಿಯಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ಟೂರ್ನಿಯನ್ನು ಮುಂದೂಡಿದ ವೇಳೆಯೇ ಐಪಿಎಲ್ ಟೂರ್ನಿ ನಡೆಯುವುದು ಖಚಿತವಾಗಿತ್ತು. ಭಾರತದಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಟೂರ್ನಿ ಯುಎಇನಲ್ಲಿ ನಡೆಯಲಿದೆ. ಉಳಿದಂತೆ ಟೂರ್ನಿಯಲ್ಲಿ 5 ಡಬಲ್ ಶೆಡ್ಯೂಲ್ ಪಂದ್ಯಗಳು ಮಾತ್ರ ನಡೆಯುವ ಅವಕಾಶವಿದೆ.