– ಯುಎಇನಲ್ಲಿ ನಡೆಸಲು ಬಿಸಿಸಿಐ ನಿರ್ಧಾರ
ನವದೆಹಲಿ: ಕೆಲ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ 2021ರ ಐಪಿಎಲ್ ಪಂದ್ಯಗಳನ್ನು ಮುಂದೂಡಲಾಗಿತ್ತು. ಇದೀಗ ಉಳಿದ ಪಂದ್ಯಗಳ ದಿನಾಂಕವನ್ನು ಬಿಸಿಸಿಐ ಪ್ರಕಟಿಸಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
NEWS ???? BCCI to conduct remaining matches of VIVO IPL in UAE.
More details here – https://t.co/HNaT0TVpz1 #VIVOIPL pic.twitter.com/nua3e01RJt
— BCCI (@BCCI) May 29, 2021
Advertisement
ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಬಿಸಿಸಿಐ ಸ್ಪೆಷಲ್ ಜನರಲ್ ಮೀಟಿಂಗ್(ಎಸ್ಜಿಎಂ) ನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾರತದಲ್ಲಿ ಮಳೆಗಾಲ ಆರಂಭವಾಗುವ ಹಿನ್ನೆಲೆ ಯುಎಇನಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದ್ದು, ಇದೇ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಐಪಿಎಲ್ನ ಉಳಿದ ಪಂದ್ಯಗಳು ನಡೆಯಲಿವೆ. ಇದನ್ನೂ ಓದಿ: ಐಪಿಎಲ್ ದ್ವಿತೀಯಾರ್ಧದಲ್ಲಿ ಧೋನಿ ಬ್ಯಾಟ್ನಿಂದ ರನ್ ಮಳೆ ಸುರಿಯಲಿದೆ: ದೀಪಕ್ ಚಹರ್
Advertisement
Advertisement
ಈ ಕುರಿತು ಶನಿವಾರವೇ ಘೊಷಿಸಿರುವ ಬಿಸಿಸಿಐ, ವಿವೋ ಐಪಿಎಲ್-2021 ಸೀಸನ್ನ ಉಳಿದ ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಪಂದ್ಯಗಳು ನಡೆಯಲಿದ್ದು, ಭಾರತದಲ್ಲಿ ಮಾನ್ಸೂನ್ ಆರಂಭವಾಗುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಧೋನಿ, ಕೊಹ್ಲಿಯ ಬಗ್ಗೆ ಒಂದೇ ಪದದಲ್ಲಿ ಉತ್ತರಿಸಿದ ಸೂರ್ಯಕುಮಾರ್ ಯಾದವ್
Advertisement
ಕೆಲ ಆಟಗಾರರಿಗೆ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಮೇ 4ರಂದು ಐಪಿಎಲ್-2021ನ್ನು ಮುಂದೂಡಲಾಗಿತ್ತು. ಪಂದ್ಯಾವಳಿ ಮುಂದೂಡುವುದಕ್ಕೂ ಮುನ್ನ 29 ಪಂದ್ಯಗಳು ನಡೆದಿವೆ. ಕೆಕೆಆರ್ನ ಇಬ್ಬರು ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಇತರೆ ತಂಡಗಳ ಕೆಲ ಆಟಗಾರರಲ್ಲಿ ಸಹ ಕೋವಿಡ್ ಪತ್ತೆಯಾಗಿತ್ತು. ಹೀಗಾಗಿ ಪಂದ್ಯವನ್ನು ಮುಂದೂಡಲಾಗಿತ್ತು.