ವಿಜಯಪುರ: ಜಿಲ್ಲೆಯಲ್ಲಿ ಕಳೆದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ ಕೋವಿಡ್-19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೆಲವು ವಿವಿಧ ಸಂಘ, ಸಂಸ್ಥೆಗಳು, ದಾನಿಗಳು ಸ್ವಯಂಪ್ರೇರಿತರಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಕೋವಿಡ್-19 ಸೋಂಕಿತರ ಚಿಕಿತ್ಸೆಗಾಗಿ ನೀಡುತ್ತಿದ್ದು, ಅವುಗಳನ್ನು ಸಂಬಂಧಿಸಿದ ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಿ ಕ್ರಮಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಅದರಂತೆ ಇಂದು ಬೆಂಗಳೂರನ ಸಂಭವ ಫೌಂಡೇಶನ್ ಇವರು ಈ ಕೆಳಕಂಡ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ರೋಗಿಗಳ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬಳಸಿಕೊಳ್ಳಲು ಜಿಲ್ಲಾಡಳಿತಕ್ಕೆ ನೀಡಿದ್ದು, ಅವುಗಳನ್ನು ಆದ್ಯತೆ ಮೇಲೆ ಸಂಬಂಧಿಸಿದ ಆಸ್ಪತ್ರೆಗಳಿಗೆ ಹಸ್ತಾಂತರಕ್ಕೆ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಈ ಆಕ್ಸಿಜನ್ ಕಾನ್ಸಂಟ್ರೇಟರ್ (10 ಎಲ್ಪಿಎಮ್ ಕೆಪ್ಯಾಸಿಟಿ)ಗಳ-10 ನೀಡಿದ್ದು, ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಸ್ವೀಕರಿಸಿದ್ದು,
ಜಿಲ್ಲಾಸ್ಪತ್ರೆಗೆ ಹಸ್ತಾಂತರಿಸಲಾಗಿದೆ.
Advertisement
ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಜಿಲ್ಲಾ ಆಸ್ಪತ್ರೆ ತಾಲೂಕು ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗುತ್ತದೆ. ಅದರಂತೆ ಸಂಭವ ಫೌಂಡೇಶನ್, ಬೆಂಗಳೂರು ಇವರು ಮುಂದಿನ ದಿನಗಳಲ್ಲಿ ಈ ಕೆಳಕಂಡ ವೈದ್ಯಕೀಯ ಉಪಕರಣಗಳನ್ನೂ ಜಿಲ್ಲೆಗೆ ನೀಡಲಾಗುವುದೆಂದು ತಿಳಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾ ಧಿಕಾರಿ ರಾಹುಲ್ ಸಿಂಧೆ, ಸಮಾಜದ ಮುಖಂಡರಾದ ಅಡಿವೆಪ್ಪ ಸಾಲಗಲ್ ಹಾಗೂ ಇತರರು ಉಪಸ್ಥಿತರಿದ್ದರು.
Advertisement