ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾದ ಶರದ್ ಪವಾರ್ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದರು.
Advertisement
Former Union Minister, Member of Rajya Sabha and @NCPspeaks President @PawarSpeaks called on Chief Minister @BSBommai in Bengaluru today.
ರಾಜ್ಯಸಭಾ ಸದಸ್ಯ ಹಾಗೂ ಎನ್.ಸಿ.ಪಿ. ಅಧ್ಯಕ್ಷ ಶರದ್ ಪವಾರ್ ರವರು ಇಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. pic.twitter.com/8pNkNmBAjK
— CM of Karnataka (@CMofKarnataka) August 6, 2021
Advertisement
ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ, ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಇದನ್ನೂ ಓದಿ : 48 ಗಂಟೆಯೊಳಗೆ ವಿದೇಶಿ ಕಾರಿನ ತೆರಿಗೆ ಪಾವತಿಸಿ – ಧನುಷ್ಗೆ ಹೈಕೋರ್ಟ್ ಆದೇಶ
Advertisement
ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವ @Jayant_R_Patil ರವರು ಇಂದು ಮುಖ್ಯಮಂತ್ರಿ @BSBommai ರವರನ್ನು ಭೇಟಿಯಾಗಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.
ಸಚಿವ @NiraniMurugesh, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು. pic.twitter.com/zU1PrXLXsz
— CM of Karnataka (@CMofKarnataka) August 6, 2021
Advertisement
ಉಭಯ ರಾಜ್ಯಗಳ ನಡುವಿನ ಅಂತರ್ ರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದರು. ಈ ಕುರಿತಂತೆ ನವದೆಹಲಿಯಲ್ಲಿ ಶೀಘ್ರ ಸಭೆ ನಿಗದಿ ಮಾಡಿ ಈ ಸಂಬಂಧ ವಿಸ್ತೃತವಾಗಿ ಚರ್ಚೆಸೋಣ ಎಂದು ಪವಾರ್ ಭರವಸೆ ನೀಡಿದರು.