ಬೆಂಗಳೂರು: ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದನ್ನೂ ಓದಿ: ಚಿರು ನನಗೆ ತಮ್ಮನಿದ್ದಂತೆ, ಪ್ರಿಯವಾದ ಹುಡುಗ: ಸುದೀಪ್
ನಟ ಕಿಚ್ಚ ಸುದೀಪ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.
Advertisement
Advertisement
ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು. ಹೀಗಾಗಿ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಮನೆಗೆ ವಾಪಸ್ ಕಳುಹಿಸಿದ್ದಾರೆ. ನಟ, ನಟಿಯರು, ನಿರ್ದೇಶರು ಮತ್ತು ಅಭಿಮಾನಿಗಳು ಸೋಶಿಯಲ್ ಮೀಡಿಯಾದ ಮೂಲಕ ಸುದೀಪ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
Advertisement
Advertisement
ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರವೇ ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೋಗಿದ್ದರು. ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದುಕೊಂಡಿದ್ದರು. ಗದ್ದುಗೆಗೆ ಪೂಜೆ, ಕುಂಕುಮಾರ್ಚನೆ ಮಾಡಿದ್ದರು. ಈ ಸಂದರ್ಭದಲ್ಲಿ ಅರ್ಚಕರು ಶಿವಕುಮಾರ ಶ್ರೀಗಳ ಭಾವಚಿತ್ರವನ್ನು ಸುದೀಪ್ ಅವರಿಗೆ ಕಾಣಿಕೆಯಾಗಿ ಕೊಟ್ಟಿದ್ದರು.
ಈ ವರ್ಷ ಸದ್ಯದ ಪರಿಸ್ಥಿತಿ ಸರಿಯಿಲ್ಲ. ಈ ಬಾರಿಯ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಆಚರಣೆ ಮಾಡುತ್ತಿಲ್ಲ ಎಂದು ಹೇಳಲು ನಾನು ವಿಷಾದಿಸುತ್ತೇನೆ. ನಾನು ನಿಮ್ಮೆಲ್ಲರ ಹಾಗೂ ನನ್ನ ಪೋಷಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತೆ. ಕೋವಿಡ್ ಇನ್ನು ದೊಡ್ಡ ಬೆದರಿಕೆಯಾಗಿಯೇ ಇದೆ. ನಾವೆಲ್ಲರೂ ಕುಟುಂಬಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ನಿಮ್ಮ ಕುಟುಂಬದವರು ನಮ್ಮ ಕುಟುಂಬದವರು ಇದ್ದಂತೆ. ಅವರು ರೋಗಕ್ಕೆ ತುತ್ತಾಗಿ ಕಷ್ಟಪಟ್ಟರೆ, ನರಳುವ ಸುದ್ದಿ ಕೇಳಿದರೆ ನಿಮ್ಮಷ್ಟೇ ನನಗೂ ನೋವಾಗುತ್ತದೆ ಎಂದು ಹೇಳಿದ್ದರು.
ನಿಮ್ಮ ಶುಭಾಶಯಗಳು ನನಗೆ ಮುಖ್ಯವಾದದ್ದೇ ಹಾಗೂ ನಾನು ಹೇಳಿದಂತೆ ಬೃಹತ್ ಸಂಖ್ಯೆಯಲ್ಲಿ ಬರುವ ನಿಮ್ಮನ್ನು ಕಾಣುವ ಸಂತೋಷವನ್ನು ಬೇರೆ ಯಾವುದೂ ನನಗೆ ನೀಡುವುದಿಲ್ಲ. ನಾನು ಖಚಿತವಾಗಿ ಹೇಳುತ್ತೇನೆ ಬಹಳ ಬೇಗ ಆ ದಿನವೂ ಬರುತ್ತದೆ ಹಾಗೂ ನಾವು ಮತ್ತೆ ಭೇಟಿಯಾಗುತ್ತೇವೆ. ಆದರೆ ಸದ್ಯಕ್ಕೆ ನಿಮ್ಮಲ್ಲಿ ಕೋರುವುದೇನೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲೂ ಹುಟ್ಟುಹಬ್ಬ ಆಚರಿಸಬೇಡಿ. ಯಾವುದೇ ಸಂಭ್ರಮಾಚರಣೆ ಹಾಗೂ ಕಾರ್ಯಕ್ರಮಗಳು ಬೇಡ. ಸಾಧ್ಯವಾದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದ ಕೆಲವರಿಗೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು.