ಮಂಗಳೂರು: ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ನಿರ್ಮಾಣ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂಕಣಿ ಅಕಾಡೆಮಿ ಅಧ್ಯಕ್ಷರೊಂದಿಗೆ ಭವನಗಳ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ರಂಗಮಂದಿರದ ಜೊತೆಗೆ ತುಳು, ಬ್ಯಾರಿ ಹಾಗೂ ಕೊಂಕಣಿ ಸಾಂಸ್ಕೃತಿಕ ಭವನದ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆಯಾ ಅಕಾಡೆಮಿ ಭವನಗಳ ನಿರ್ಮಾಣಕ್ಕೆ ಸಂಬಂಧಿಸಿದವರು ಒಪ್ಪಿಗೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ
Advertisement
ಜಿಲ್ಲಾ ರಂಗಮಂದಿರಕ್ಕೆ ಮೊದಲ ಹಂತದಲ್ಲಿ 5 ಕೋಟಿರೂ., ತುಳು ಭವನ ನಿರ್ಮಾಣಕ್ಕೆ ಎರಡನೇ ಹಂತದಲ್ಲಿ 3.5 ಕೋಟಿ ರೂ., ಕೊಂಕಣಿ ಮತ್ತು ತುಳು ಅಕಾಡೆಮಿಯ ಭವನಕ್ಕಾಗಿ ಮೊದಲ ಹಂತದಲ್ಲಿ ತಲಾ 3 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದರು.
Advertisement
Advertisement
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಶಾಸಕ ಡಾ.ಭರತ್ ಶೆಟ್ಟಿ, ಉಪವಿಭಾಗಾಧಿಕಾರಿ ಮದನ್ ಮೋಹನ್, ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ರೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ತಹಶೀಲ್ದಾರರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.