ಕೇಪ್ಟೌನ್: ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬಳು ಹತ್ತು ಮಕ್ಕಳಿಗೆ ಜನ್ಮ ನೀಡಿ ವಿಶ್ವದಾಖಲೆ ನಿರ್ಮಿಸಿದ್ದಾರೆ ಎಂಬ ಸುದ್ದಿ ಪ್ರಕಟವಾಗಿತ್ತು. ಆದರೆ ಇದೀಗ ಬಿಬಿಸಿ ಸುದ್ದಿ ವಾಹಿನಿ, ದಕ್ಷಿಣ ಆಫ್ರಿಕಾದಲ್ಲಿ ಯಾವುದೇ ಮಹಿಳೆ ಹತ್ತು ಮಕ್ಕಳಿಗೆ ಜನ್ಮ ನೀಡಿಲ್ಲ ಹಾಗೂ ಅಲ್ಲಿನ ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ಎಂದು ವರದಿ ಪ್ರಕಟಿಸಿದೆ.
Advertisement
ಗೋಸಿಯಮ್ ತಮಾರಾ ಸಿಥೋಲ್(37) ಎಂಬ ಮಹಿಳೆ ಮಕ್ಕಳಿಗೆ ಜನ್ಮ ನೀಡಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ ಹಾಗೂ ಇತ್ತೀಚೆಗೆ ಆಕೆ ಗರ್ಭಿಣಿ ಕೂಡ ಆಗಿರಲಿಲ್ಲ ಎಂದು ವೈದ್ಯಕೀಯ ಪರೀಕ್ಷೆ ಮೂಲಕ ತಿಳಿದು ಬಂದಿದೆ. ಸದ್ಯ ಇದೀಗ ಮಹಿಳೆಯನ್ನು ಮಾನಸಿಕ ಆರೋಗ್ಯ ಕಾಯ್ದೆ ಅಡಿ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪ್ರಾಂತೀಯ ಸರ್ಕಾರ ತಿಳಿಸಿದೆ.
Advertisement
Advertisement
ಎರಡು ವಾರಗಳ ಹಿಂದೆ ಗೋಸಿಯಮ್ ತಮಾರಾ ಸಿಥೋಲ್ ಎಂಬ ಮಹಿಳೆ ಪ್ರಿಟೋರಿಯಾದ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಏಳು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಸುದ್ದಿ ಹಬ್ಬಿತ್ತು. ಆದರೆ ಇದೀಗ ಆ ಸುದ್ದಿ ಸುಳ್ಳು ಎಂಬ ವಿಚಾರ ಬಹಿರಂಗಗೊಂಡಿದೆ. ಇದನ್ನೂ ಓದಿ: ಒಂದೇ ಬಾರಿಗೆ 10 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
Advertisement