– ಉತ್ತರ ಪ್ರದೇಶದಲ್ಲಿ ನಿಲ್ಲದ ಅಪರಾಧ ಪ್ರಕರಣಗಳು
ಲಕ್ನೋ: 19 ವರ್ಷದ ಯುವತಿಯ ಗ್ಯಾಂಗ್ರೇಪ್ ಪ್ರಕರಣ ಮಾಸುವ ಮುನ್ನವೇ ಹತ್ರಾಸ್ ನಲ್ಲಿ ಮತ್ತೊಂದು ಅತ್ಯಾಚಾರ ನಡೆದಿದೆ. ಅದು ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಹತ್ರಾಸ್ ನ ಸಸ್ನಿ ಎಂಬಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದ ಎಂದು ಸರ್ಕಲ್ ಆಫಿಸರ್ ರುಚಿ ಗುಪ್ತಾ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.
Advertisement
Hathras: A 4-year-old girl was allegedly raped by her relative in Sasni area. Ruchi Gupta, Circle Officer says, "The accused has been arrested. A case has been registered." (13.11) pic.twitter.com/Xccs4CjIO8
— ANI UP/Uttarakhand (@ANINewsUP) October 14, 2020
Advertisement
ಸೆಪ್ಟೆಂಬರ್ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಸೆ.29ರಂದು ಮೃತಪಟ್ಟಿದ್ದಳು. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ
Advertisement
Advertisement
ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಅಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದರು. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ
ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಎಸ್ಐಟಿ ನೀಡಿತ್ತು. ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಸಿಬಿಐಗೆ ನೀಡಿದ್ದರು. ಮಂಗಳವಾರ ಹತ್ರಾಸ್ ಸಂತ್ರಸ್ತೆಯ ಅಂತ್ಯಕ್ರಿಯೆ ಮಾಡಿದ್ದ ಸ್ಥಳಕ್ಕೆ ಸಿಬಿಐ ತಂಡ ಭೇಟಿ ನೀಡಿತ್ತು. ಹಾಗೆ ಈ ಮೊದಲು ತನಿಖೆ ನಡೆಸಿದ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡಿದೆ.