ಚಿಕ್ಕಮಗಳೂರು: ನಾನು ಸ್ವಲ್ಪ ಒರಟ, ಹಳ್ಳಿ ಭಾಷೆಯಲ್ಲಿ ಮಾತಾಡ್ತೀನಿ. ಹೀಗಾಗಿ ನನ್ನ ವಿರುದ್ಧ ಟೀಕೆ ಮಾಡಿದ್ದೇ ಮಾಡಿದ್ದು ಎಂದು ಹೇಳುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ವಿರುದ್ಧ ಟೀಕೆ ಮಾಡುವವರಿಗೆ ಟಾಂಗ್ ನೀಡಿದ್ದಾರೆ.
Advertisement
ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆ ಬೀಳ್ತಾರೆ. ಟೀಕೆ ಮಾಡಲು ಎಲ್ಲರಿಗೂ ನಾನೊಬ್ಬನೇ ಸಿಕ್ಕಿರುವುದು. ಬಿಜೆಪಿಯವರು ಗೋಮಾಂಸ ನಿಷೇಧ ಕಾಯ್ದೆ ತಂದಿದ್ದಾರೆ. ನಾನು ದನದ ಮಾಂಸ, ಎಮ್ಮೆ ಮಾಂಸ ತಿಂದಿಲ್ಲ, ತಿನ್ನಬೇಕು ಅನ್ನಿಸಿದರೆ ತಿಂತೀನಿ ಅಂದೆ. ನನ್ನ ಇಷ್ಟ, ನೀನು ಯಾವನ್ ಕೇಳಕ್ಕೆ ನಂಗಿಷ್ಟ ನಾನು ತಿಂತೀನಿ ಅಂದೆ. ಅಷ್ಟಕ್ಕೇ ನನ್ನ ವಿರುದ್ಧ ಏನು ವ್ಯಾಖ್ಯಾನಗಳು, ಚರ್ಚೆಗಳು ಎಂದು ಕುಟುಕಿದ್ದಾರೆ.
Advertisement
Advertisement
ಓಟು ಹಾಕಲು ಹೋದಾಗ ನಮ್ಮ ಪಾರ್ಟಿಯವನು ಊಟಕ್ಕೆ ಕರೆದೊಯ್ದ, ಅವತ್ತು ಕೋಳಿ ಮಾಡಿದ್ರು, ಅವತ್ತೇ ಹನುಮ ಜಯಂತಿ. ನಮ್ಮ ಹುಡುಗ ಮಾಂಸ ತಿನ್ನಲ್ಲ ಹನುಮ ಜಯಂತಿ ಅಂದ, ಹನುಮ ಹುಟ್ಟಿದ್ದು ಯಾರಿಗೆ ಗೊತ್ತು, ನಮಗ್ಯಾರಿಗೂ ಗೊತ್ತಿಲ್ಲ. ಮಾಂಸ ತಿಂದರೆ ಏನು, ಹನುಮ ಜಯಂತಿ ಡೇಟ್ ಗೊತ್ತಿಲ್ಲ ಅಂದ್ರೆ ತಪ್ಪಾ? ಹನುಮ ಯಾವತ್ತು ಹುಟ್ಟಿದ್ದ ನಿಮಗೆ ಗೊತ್ತಾ? ಎಲ್ಲರಿಗೂ ನಾನೊಬ್ಬನೇ ಸಿಕ್ಕಿರುವುದು ಟೀಕೆ ಮಾಡಲು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.