ಚಿಕ್ಕಮಗಳೂರು: ಹಾಡಹಗಲೇ ಮನೆಗೆ ನುಗ್ಗಿ, ಚಾಕು ತೋರಿಸಿ ಚಿನ್ನಾಭರಣ, ಹಣ ದರೋಡೆ ಮಾಡಿರುವ ಭಯಾನಕ ಘಟನೆ ನಡೆದಿದೆ.
Advertisement
ನಗರದ ಎಐಟಿ ವೃತ್ತದ ಬೈಪಾಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಕಲ್ಲು ತೂರಿ ಕಳ್ಳರನ್ನು ಹಿಡಿಯಲು ಸ್ಥಳೀಯರು ಯತ್ನಿಸಿದ್ದಾರೆ. ಅಲ್ಲದೆ ಕಳ್ಳರ ಬೈಕ್ ಮೇಲೆ ಅಗ್ನಿಶಾಮಕ ವಾಹನ ಸಹ ದಾಳಿ ನಡೆಸಿದೆ. ಈ ವೇಳೆ ಖದೀಮರು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.
Advertisement
Advertisement
ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದು ದರೋಡೆಕೋರರು ಓಡಿದ್ದು, ಸ್ಥಳೀಯರು ಹಿಡಿಯಲು ಯತ್ನಿಸಿದರೂ ಕೈಗೆ ಸಿಗದೆ ಕಳ್ಳರು ಪರಾರಿಯಾಗಿದ್ದಾರೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇಬ್ಬರೂ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.