ಹಾಸನ: ಜಿಲ್ಲೆಯಲ್ಲಿ ಕೊರೊನಾ ಮರಣಮೃದಂಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕೂಡ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಹಾಸನದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಮತ್ತು ಅರಸೀಕೆರೆ ಮೂಲದ 47 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 29ರಂದು ಡಯಾಲಿಸಿಸ್ಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ ನಾಲ್ಕರಂದು ಐಸಿಯುಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಮೃತಪಟ್ಟಿದ್ದಾರೆ.
- Advertisement 2-
- Advertisement 3-
ಅರಸೀಕೆರೆ ಮೂಲದ 47 ವರ್ಷದ ವ್ಯಕ್ತಿ ಜೂನ್ 27 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಕಿಡ್ನಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಹಾಸನದಲ್ಲಿ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿರುವುದು ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಜಿಲ್ಲೆಯ ಜನ ಆತಂಕಕ್ಕೊಳಗಾಗಿದ್ದಾರೆ.