– ನಿರ್ಧಾರ ಹಿಂಪಡೆಯಲು ಆಗ್ರಹ
ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರ್ಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸಾದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದೂ ಪರಿಷದ್ ವಿರೋಧಿಸುತ್ತದೆ.
Advertisement
ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಾಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.
Advertisement
ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು. ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್
Advertisement