ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್ ಫಂಗಸ್ ಸೊಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ ಬ್ಲ್ಯಾಕ್ ಫಂಗಸ್ಗೆ ಮೊದಲ ಬಲಿಯಾದ ಪ್ರಕರಣ ಇದಾಗಿದೆ.
ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
Advertisement
ಬ್ಲ್ಯಾಕ್ ಫಂಗಸ್ ಸೋಂಕಿಗೆ ಕಿಮ್ಸ್ ನಲ್ಲಿ ಜಿಲ್ಲೆಯ ಒಟ್ಟು 78 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾನೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.