-ಶಾಸಕ ಸುರೇಂದ್ರ ಹೇಳಿಕೆಗೆ ರಾಗಾ ಕಿಡಿ
ಲಕ್ನೋ: ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಸಂಸ್ಕಾರ ಕಲಿಸಿದ್ರೆ ಅತ್ಯಾಚಾರ ಪ್ರಕರಣಗಳು ಕಡಿಮೆ ಆಗುತ್ತವೆ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಹತ್ರಾಸ್ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ್ದ ಶಾಸಕರು, ದೇಶದಲ್ಲಿ ಸಂಸ್ಕಾರ ಮತ್ತು ಉತ್ತಮ ಮೌಲ್ಯಗಳಿಂದಲೇ ಅತ್ಯಾಚಾರ ಪ್ರಕರಣಗಳು ನಿಲ್ಲುತ್ತೇವೆಯೇ ಹೊರತು ಯಾವುದೇ ಕಾನೂನು, ಖತ್ತಿಯಿಂದ ಅಲ್ಲ. ಹಾಗಾಗಿ ಎಲ್ಲ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಸಂಸ್ಕಾರ ಮತ್ತು ಸರ್ಕಾರ ಜೊತೆಯಾಗಿದ್ರೆ ಮಾತ್ರ ದೇಶವನ್ನು ಸುಂದರವನ್ನಾಗಿ ಮಾಡಬಹುದು ಎಂದು ಹೇಳಿದ್ದರು.
Advertisement
#WATCH Incidents like these can be stopped with help of good values, na shashan se na talwar se. All parents should teach their daughters good values. It's only the combination of govt & good values that can make country beautiful: Surendra Singh, BJP MLA from Ballia. #Hathras pic.twitter.com/47AmnGByA3
— ANI UP/Uttarakhand (@ANINewsUP) October 3, 2020
Advertisement
ನಾನು ಶಾಸಕನ ಜೊತೆ ಶಿಕ್ಷಕನಾಗಿದ್ದೇನೆ. ಹಾಗಾಗಿ ತಮ್ಮ ವಯಸ್ಸಿಗೆ ಬಂದ ಮಗಳಿಗೆ ಪೋಷಕರು ಒಳ್ಳೆಯದನ್ನು ಕಲಿಸಬೇಕು. ಮಕ್ಕಳಿಗೆ ಸಂಸ್ಕಾರ ಕಲಿಸೋದು ಅವರ ಕುಟುಂಬದ ಕರ್ತವ್ಯವಾಗಿರುತ್ತದೆ ಎಂದು ಸುರೇಂದ್ರ ಸಿಂಗ್ ಹೇಳಿಕೆ ನೀಡಿದ್ದರು.
Advertisement
ಸುರೇಂದ್ರ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ಇದು ಆರ್ಎಸ್ಎಸ್ ನಲ್ಲಿರುವ ಪುರುಷ ಕೋಮುವಾದಿಗಳ ಕೆಟ್ಟ ಮನಸ್ಥಿತಿ. ಇವರ ಪ್ರಕಾರ ಪುರುಷರು ಅತ್ಯಾಚಾರ ಎಸಗುತ್ತಾರೆ. ಮಹಿಳೆಯರಿಗೆ ಒಳ್ಳೆಯ ಮತ್ತು ಉತ್ತಮ ಮೌಲ್ಯಗಳನ್ನು ಕಲಿಸಬೇಕಿದೆ ಎಂದು ಕಿಡಿ ಕಾರಿದ್ದಾರೆ.
Advertisement
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಳಿ ಉತ್ತರ ಪ್ರದೇಶ ಪೊಲೀಸರು ಕ್ಷಮೆ ಕೇಳಿದ್ದಾರೆ. ಹತ್ರಾಸ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಯುಪಿ ಪೊಲೀಸರು ಮತ್ತು ಕಾಂಗ್ರೆಸ್ ನಾಯಕರು ನಡುವೆ ಸಂಘರ್ಷವೇ ಉಂಟಾಗಿತ್ತು.
ಈ ಹಿನ್ನೆಲೆ ಯುಪಿ ಪೊಲೀಸರು ಇಬ್ಬರು ನಾಯಕರ ಬಳಿ ಕ್ಷಮೆ ಕೋರಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ. ಸೆಪ್ಟೆಂಬರ್ 30ರಂದು ಪೊಲೀಸರು ನಡುವೆ ನಡೆದ ಗಲಾಟೆಯಲ್ಲಿ ರಾಹುಲ್ ಗಾಂಧಿ ಕೆಳಗೆ ಬಿದ್ದಿದ್ದರು. ಅಕ್ಟೋಬರ್ 3ರಂದು ನಡೆದ ಸಂಘರ್ಷದಲ್ಲಿ ಪುರುಷ ಪೊಲೀಸ್ ಅಧಿಕಾರಿಯೋರ್ವ ಪ್ರಿಯಾಂಕಾ ಗಾಂಧಿಯವರ ಕುರ್ತಾ ಹಿಡಿದಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಪೊಲೀಸರ ನಡೆಯನ್ನ ಖಂಡಿಸಿದ್ದರು.
ಶಿವಸೇನೆಯ ಸಂಸದ ಸಂಜಯ್ ರಾವತ್ ವೈರಲ್ ಆಗಿದ್ದ ಫೋಟೋ ಟ್ವೀಟ್ ಮಾಡಿಕೊಂಡು, ಯೋಗಿ ಜೀ ನಿಮ್ಮ ರಾಜ್ಯದಲ್ಲಿ ಮಹಿಳಾ ಪೊಲೀಸರು ಇಲ್ಲವಾ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದರು.