ಚಿಕ್ಕಬಳ್ಳಾಪುರ: ವಿಶ್ವ ಮಹಿಳಾ ದಿನಾಚರಣೆಯಂದೇ 2 ವರ್ಷದ ಹೆಣ್ಣು ಮಗುವನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ.
ಗ್ರಾಮದ 28 ವರ್ಷದ ರಾಧ ತನ್ನ ಎರಡು ವರ್ಷದ ಮಗು ಮನುಜಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯ ಕೋಣೆಯೊಳಗೆ ಆತ್ಮಹತ್ಯೆಗೆ ಶರಣಾಗಿದ್ದು, ಕೋಣೆಯ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
Advertisement
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಮಂಜುನಾಥ್ ಹಾಗೂ ಅತ್ತೆ ಆಶ್ವತ್ಥಮ್ಮಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪತಿ ಹಾಗೂ ಅತ್ತೆ ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಸಂಬಂಧಿಕರ ಅಕ್ರಂದನ ಮುಗಿಲುಮುಟ್ಟಿದೆ.