ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಹಾಮಾರಿಯನ್ನು ಕಟ್ಟಿಹಾಕಲು ಬಿಬಿಎಂಪಿ ಹೊಸ ಪ್ಲಾನ್ ಮಾಡಿಕೊಂಡಿದ್ದು, ದಂಡಾಸ್ತ್ರ ಪ್ರಯೋಗಿಸುವ ಕುರಿತು ಚಿಂತನೆ ನಡೆಸಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಕೇವಲ ಕಠಿಣ ಕಾನೂನು ಜಾರಿ ಎಂದು ಹೇಳಿ ಕೈ ತೊಳೆದುಕೊಳ್ಳುತ್ತಿದೆ. ಆದ್ರೆ ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನ ಜಾರಿಗೆ ತರಲು ಮುಂದಾಗಿದೆ.
Advertisement
ಹೊಸ ಪ್ಲಾನ್: ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ಜಾರಿ ಆಗದ ಹಿನ್ನೆಲೆ ಕೊರೊನಾ ಪೀಡಿತ ಏರಿಯಾಗಳ ಬಗ್ಗೆ ಹೆಚ್ಚು ಗಮನ ನೀಡುವುದು. ಅಪಾರ್ಟ್ ಮೆಂಟ್ ಹೆಚ್ಚಿರುವ ಪ್ರದೇಶಗಳಲ್ಲಿ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸುವುದು. ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಅಧಿಕಾರಿಗಳಿಗೆ ಪ್ರತ್ಯೇಕವಾಗಿ ಟಾಸ್ಕ್ ನೀಡಿ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು. ಟಫ್ರೂಲ್ಸ್ ಬದಲು ಕೊರೋನಾ ಬಗ್ಗೆ ಜಾಗೃತಿ ಮೂಡಿಸುವುದು. ರೂಲ್ಸ್ ಬ್ರೇಕ್ ಮಾಡಿದ್ರೆ ದಂಡಾಸ್ತ್ರ ಪ್ರಯೋಗಕ್ಕೆ ಮುಂದಾಗುವುದು.
Advertisement
Advertisement
ಬೆಂಗಳೂರಿನಲ್ಲಿ ಇಂದು ಬರೋಬ್ಬರಿ ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗುವ ಸಾಧ್ಯತೆಗಳಿವೆ. ಸೋಮವಾರ 893 ಪ್ರಕರಣಗಳು ಬೆಂಗಳೂರಿನಲ್ಲಿ ವರದಿ ಆಗಿದ್ದವು. ಸೋಮವಾರ ಹೊರತು ಪಡಿಸಿ ಸತತ ನಾಲ್ಕು ದಿನ ಕೊರೊನ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.