– ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ಬಿಡುಗಡೆ
ಹಾಸನ: ಹಾಸನಕ್ಕೆ ಮುಂಬೈನಿಂದ ಬರಲು ಸಾವಿರಕ್ಕೂ ಹೆಚ್ಚು ಜನರ ಸೇವಾಸಿಂಧು ಮೂಲಕ ನೋಂದಣಿ ಮಾಡಿಕೊಂಡಿದ್ದು, ಹಾಸನದಲ್ಲಿ ಕೊರೊನಾ ಭೀತಿ ಮತ್ತಷ್ಟು ಹೆಚ್ಚಾಗುವ ಆತಂಕ ಮೂಡಿದೆ.
ಗ್ರೀನ್ಜೋನ್ ಆಗಿದ್ದ ಹಾಸನದಲ್ಲಿ ನಿನ್ನೆ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರಿಗೆ ಮತ್ತು ಇಂದು ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಹಾಸನದಲ್ಲಿ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಸೋಂಕಿತರೆಲ್ಲರೂ ಬಾಂಬೆಯಿಂದ ವಾಪಸ್ಸಾದವರೇ ಆಗಿದ್ದಾರೆ.
Advertisement
Advertisement
ಈ ಹಿನ್ನೆಲೆಯಲ್ಲಿ ಮುಂಬೈನಿಂದ ಹಾಸನಕ್ಕೆ ಬರುವವರು ಸಾಧ್ಯವಾದಷ್ಟು ಇದ್ದಲ್ಲೇ ಇರಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಮನವಿ ಮಾಡಿದ್ದಾರೆ. ಒಂದು ವೇಳೆ ಹೊರರಾಜ್ಯದಿಂದ ಹಾಸನಕ್ಕೆ ಬಂದರೆ ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿ ಇರಲು ಸೂಚನೆ ನೀಡಿದ್ದಾರೆ. ಇಂದು ಪಾಸಿಟಿವ್ ಕಂಡುಬಂದ ನಾಲ್ವರ ಟ್ರಾವೆಲ್ ಹಿಸ್ಟರಿ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ, ನಾಲ್ವರೂ ಒಂದೇ ಕುಟುಂಬದವರಾಗಿದ್ದು, ಗಂಡ ಹೆಂಡತಿ ಇಬ್ಬರು ಮಕ್ಕಳಾಗಿದ್ದಾರೆ ಎಂದಿದ್ದಾರೆ.
Advertisement
Advertisement
ಸೋಂಕಿತರು ನಿನ್ನೆ ಮೇ 12 ರಂದು ಮುಂಬೈನಿಂದ ಸ್ವಂತ ಕಾರಿನಲ್ಲಿ ಹಾಸನಕ್ಕೆ ಬಂದಿದ್ದಾರೆ. ಈ ಕುಟುಂಬ ಎಲ್ಲೂ ಸುತ್ತಾಡದೆ ನೇರವಾಗಿ ಜಿಲ್ಲಾಡಳಿತ ಮಾಡಿರುವ ಕ್ವಾರಂಟೈನ್ ಗೆ ಹೋಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಬಂದಿರುವವರ ಜೊತೆ ಕ್ವಾರಂಟೈನ್ ಕೇಂದ್ರದಲ್ಲಿದ್ದ 57 ಮಂದಿಯನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾಗಿ ತಿಳಿಸಿದ್ದಾರೆ.