ಬೆಂಗಳೂರು: ಹೋಂ ಕ್ವಾರಂಟೈನ್ಲ್ಲಿದ್ದರೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಕೊರೊನಾ ನಿಯಂತ್ರಣ ಸಂಬಂಧ ಕರ್ತವ್ಯ ಮಾಡುತ್ತಿದ್ದಾರೆ.
ಸುಧಾಕರ್ ಅವರ ತಂದೆ, ಪತ್ನಿ ಹಾಗೂ ಮಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಜೊತೆಗೆ ಅವರ ಮನೆಕೆಲಸದವರಿಗೂ ಸೋಂಕು ಇರುವುದು ಖಚಿತವಾಗಿತ್ತು. ಇವರೆಲ್ಲರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿ ಇದ್ದ ಸುಧಾಕರ್ ಅವರು ಸದ್ಯ ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ.
Advertisement
ಗೃಹ ಕ್ವಾರಂಟೈನ್ ನಲ್ಲಿರುವ ನಾನು ಇಂದು ಮನೆಯಿಂದಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದೆ. ಅನೇಕ ಮಹತ್ವಪೂರ್ಣ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಡಿಸಿಎಂ ಶ್ರೀ @drashwathcn, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಸಚ್ಚಿದಾನಂದ, ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. pic.twitter.com/nFRVQIXcyf
— Dr Sudhakar K (@mla_sudhakar) June 24, 2020
Advertisement
ಹೋಂ ಕ್ವಾರಂಟೈನ್ ಅದರೂ ತನ್ನ ಕೊರೊನಾ ವಿರುದ್ಧದ ಹೋರಾಟ ನಿಲ್ಲಿಸದ ಸುಧಾಕರ್, ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿಕೊಂಡು ಮನೆಯಲ್ಲೇ ಕುಳಿತು ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಗೃಹ ಕ್ವಾರಂಟೈನ್ನಲ್ಲಿರುವ ನಾನು ಇಂದು ಮನೆಯಿಂದಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದೆ. ಅನೇಕ ಮಹತ್ವಪೂರ್ಣ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.
Advertisement
ಹಿರಿಯ ಅಧಿಕಾರಿಗಳು ಮತ್ತು ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ, ಬೌರಿಂಗ್ ಮೊದಲಾದ ಕೋವಿಡ್ ಆಸ್ಪತ್ರೆಗಳ ನಿರ್ದೇಶಕರ ಜೊತೆಗೆ ಇಂದು ನನ್ನ ಮನೆಯಿಂದಲೇ ವಿಡಿಯೋ ಸಂವಾದ ನಡೆಸಿದೆ. ರೋಗಿಗಳ ದಾಖಲಾತಿ, ಆಹಾರ, ಸ್ವಚ್ಛತೆ, ಚಿಕಿತ್ಸೆಗಳಲ್ಲಿ ಲೋಪಗಳ ದೂರು ಬಂದಲ್ಲಿ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. pic.twitter.com/ltPUeEjlsp
— Dr Sudhakar K (@mla_sudhakar) June 23, 2020
Advertisement
ಜೊತೆಗೆ ಹಿರಿಯ ಅಧಿಕಾರಿಗಳು ಮತ್ತು ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ, ಬೌರಿಂಗ್ ಮೊದಲಾದ ಕೋವಿಡ್ ಆಸ್ಪತ್ರೆಗಳ ನಿರ್ದೇಶಕರ ಜೊತೆಗೆ ಮಂಗಳವಾರ ನನ್ನ ಮನೆಯಿಂದಲೇ ವಿಡಿಯೋ ಸಂವಾದ ನಡೆಸಿದ್ದೇನೆ. ರೋಗಿಗಳ ದಾಖಲಾತಿ, ಆಹಾರ, ಸ್ವಚ್ಛತೆ, ಚಿಕಿತ್ಸೆಗಳಲ್ಲಿ ಲೋಪಗಳ ದೂರು ಬಂದಲ್ಲಿ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದೇನೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.