ಹಾವೇರಿ: ಊರಿನ ಯುವಕರು, ಹುಡುಗರೆಲ್ಲ ಸೇರಿ ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಆಡಿ ಸಂಭ್ರಮಿಸಿದ್ದರು. ಗ್ರಾಮದಲ್ಲಿ ಸಹಜವಾಗಿಯೇ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಆದರೆ ಬಣ್ಣದಾಟದ ನಂತರ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ಬಾಲಕ ತೀವ್ರ ಅಸ್ವಸ್ಥಗೊಂಡ ಘಟನೆ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.
Advertisement
ಗ್ರಾಮದ ಬಳಿ ಇರುವ ವರದಾ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಬಾಲಕರನ್ನು ಮಹೇಶ್ ಮುರಡಣ್ಣನವರ್(10), ವೀರೇಶ್ ಅಕ್ಕಿವಳ್ಳಿ(10) ಎಂದು ಗುರುತಿಸಲಾಗಿದೆ. ಯೋಗೇಶ್ ಎಂಬ 7 ವರ್ಷದ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಇಬ್ಬರು ಬಾಲಕರ ದೇಹಗಳನ್ನು ಸ್ಥಳೀಯರು ವರದಾ ನದಿಯಿಂದ ಹೊರ ತೆಗೆದಿದ್ದಾರೆ.
Advertisement
Advertisement
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.